Featured

ಸ್ಕ್ಯಾನಿಂಗ್‌ಗೆ ಬಂದ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ : ರೆಡಿಯಾಲಜಿಸ್ಟ್ ವಿರುದ್ಧ FIR – vishwanews24

ಸ್ಕ್ಯಾನಿಂಗ್‌ಗೆ ಬಂದ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ : ರೆಡಿಯಾಲಜಿಸ್ಟ್ ವಿರುದ್ಧ FIR

ಆನೇಕಲ್: ಸ್ಕ್ಯಾನಿಂಗ್‌ಗೆ ಬಂದ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ ರೆಡಿಯಾಲಜಿಸ್ಟ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ನಡೆದಿದೆ.

ಆನೇಕಲ್ ಪಟ್ಟಣದ ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಜಯಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇತ್ತೀಚಿಗೆ ಮಹಿಳೆಯೋರ್ವರು ಹೊಟ್ಟೆ ನೋವೆಂದು ಪತಿಯೊಂದಿಗೆ ಸ್ಕ್ಯಾನಿಂಗ್‌ ಸೆಂಟರ್‌ಗೆ ಆಗಮಿಸಿದ್ದರು. ಈ ವೇಳೆ ಸ್ಕ್ಯಾನಿಂಗ್‌ ಮಾಡುವಾಗ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಜೊತೆಗೆ ಖಾಸಗಿ ಅಂಗಗಳಿಗೆ ಕೈ ಹಾಕಿ, ಕಾಮಾಂಧ ಡಾಕ್ಟರ್ ವಿಕೃತಿ ಮೆರೆದಿದ್ದಾನೆ. ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಬೆದರಿಕೆ ಹಾಕಿ, ಈ ವಿಚಾರ ಹೊರಗೆ ಬಾಯ್ಬಿಡದಂತೆ ಮಹಿಳೆಗೆ ಧಮ್ಕಿ ಹಾಕಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಯಿಸೋದಾಗಿ ಬೆದರಿಕೆ ಹಾಕಿದ್ದಾನೆ.

ಈ ಘಟನೆಯನ್ನು ಮಹಿಳೆ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಕೂಡಲೇ ಮಹಿಳೆ ಆನೇಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬದಲಾಗಿ ಠಾಣೆಗೆ ಕರೆಸಿ, ಬಿಟ್ಟುಕಳುಹಿಸಿದ್ದಾರೆ ಎನ್ನಲಾಗಿದೆ.

ಸಂತ್ರಸ್ತ ಮಹಿಳೆ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago