ಆನೇಕಲ್: ಸ್ಕ್ಯಾನಿಂಗ್‌ಗೆ ಬಂದ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ ರೆಡಿಯಾಲಜಿಸ್ಟ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ನಡೆದಿದೆ.
ಆನೇಕಲ್ ಪಟ್ಟಣದ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಜಯಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಇತ್ತೀಚಿಗೆ ಮಹಿಳೆಯೋರ್ವರು ಹೊಟ್ಟೆ ನೋವೆಂದು ಪತಿಯೊಂದಿಗೆ ಸ್ಕ್ಯಾನಿಂಗ್ ಸೆಂಟರ್‌ಗೆ ಆಗಮಿಸಿದ್ದರು. ಈ ವೇಳೆ ಸ್ಕ್ಯಾನಿಂಗ್ ಮಾಡುವಾಗ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಜೊತೆಗೆ ಖಾಸಗಿ ಅಂಗಗಳಿಗೆ ಕೈ ಹಾಕಿ, ಕಾಮಾಂಧ ಡಾಕ್ಟರ್ ವಿಕೃತಿ ಮೆರೆದಿದ್ದಾನೆ. ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಬೆದರಿಕೆ ಹಾಕಿ, ಈ ವಿಚಾರ ಹೊರಗೆ ಬಾಯ್ಬಿಡದಂತೆ ಮಹಿಳೆಗೆ ಧಮ್ಕಿ ಹಾಕಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಯಿಸೋದಾಗಿ ಬೆದರಿಕೆ ಹಾಕಿದ್ದಾನೆ.
ಈ ಘಟನೆಯನ್ನು ಮಹಿಳೆ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಕೂಡಲೇ ಮಹಿಳೆ ಆನೇಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬದಲಾಗಿ ಠಾಣೆಗೆ ಕರೆಸಿ, ಬಿಟ್ಟುಕಳುಹಿಸಿದ್ದಾರೆ ಎನ್ನಲಾಗಿದೆ.
ಸಂತ್ರಸ್ತ ಮಹಿಳೆ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…