Featured

ಸ್ಥಳೀಯ ಸಂಸ್ಥೆಗಳ ಚುನಾವಣೆ : ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ ಎಂಬುದನ್ನು ಈ ಫಲಿತಾಂಶ ಇನ್ನೊಮ್ಮೆ ಸಾಬೀತು ಮಾಡಿದೆ : ಸಿದ್ದರಾಮಯ್ಯ

ಸ್ಥಳೀಯ ಸಂಸ್ಥೆಗಳ ಚುನಾವಣೆ : 1,187 ಸ್ಥಾನಗಳ ಪೈಕಿ 500ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು

ಸ್ಥಳೀಯ ಸಂಸ್ಥೆಗಳ ಚುನಾವಣೆ : ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ ಎಂಬುದನ್ನು ಈ ಫಲಿತಾಂಶ ಇನ್ನೊಮ್ಮೆ ಸಾಬೀತು ಮಾಡಿದೆ : ಸಿದ್ದರಾಮಯ್ಯ

ಬೆಂಗಳೂರು: “ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 1,187 ಸ್ಥಾನಗಳ ಪೈಕಿ 500ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ‌ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ ಎಂಬುದನ್ನು ಈ ಫಲಿತಾಂಶ ಇನ್ನೊಮ್ಮೆ ಸಾಬೀತು ಮಾಡಿದೆ” ಎಂದಿದ್ದಾರೆ.

“ಚುನಾವಣೆಯಲ್ಲಿ ಹಣ ಖರ್ಚು ಮಾಡಿದರೆ ಗೆಲ್ಲಬಹುದು ಎಂಬ ಬಿಜೆಪಿ ಅವರ ಸೊಕ್ಕನ್ನು ರಾಜ್ಯದ ಜನ ಮುರಿದಿದ್ದಾರೆ. ಈ ಫಲಿತಾಂಶ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆ, ಭ್ರಷ್ಟಾಚಾರ ಮತ್ತು ದುರಾಡಳಿತಕ್ಕೆ ಜನತೆ ನೀಡಿರುವ ಸಂದೇಶ” ಎಂದು ತಿಳಿಸಿದ್ದಾರೆ.

“ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ, ಮತ ನೀಡಿದ ಎಲ್ಲಾ ಮತದಾರರಿಗೆ ಮತ್ತು ಅಭ್ಯರ್ಥಿಗಳ ಪರವಾಗಿ ದುಡಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ಧನ್ಯವಾದಗಳು ಹಾಗೂ ಜಯಗಳಿಸಿರುವ ನಮ್ಮ ಪಕ್ಷದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳು” ಎಂದು ಹೇಳಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

12 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

12 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

12 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

12 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago