ಶಿವಮೊಗ್ಗ, :ಶಿವಮೊಗ್ಗ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಶಿಕಾರಿಪುರದಲ್ಲಿ ಯಡಿಯೂರಪ್ಪ ಗೆ ಹಿನ್ನಡೆಯಾಗಿದೆ.
ಜಿಲ್ಲೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕೆಲವೆಡೆ ಜಂಟಿಯಾಗಿ ಮೈತ್ರಿಯಾಗಿ ಕಣಕ್ಕಿಳಿದಿದ್ದರೆ ಕೆಲವೆಡೆ ಏಕಾಂಗಿಯಾಗಿ ಸ್ಪರ್ಧಿಸಿದೆ. ಇವೆಲ್ಲದರ ನಡುವೆ ದೋಸ್ತಿ ಮತ್ತು ಬಿಜೆಪಿ ನಡುವೆ ನೇರ ಹೋರಾಟ ನಡೆದು ಇಬ್ಬರು ಸಿಹಿ ಕಹಿ ಅನುಭವವನ್ನು ಪಡೆದಂತಾಗಿದೆ.
ಸಾಗರ ನಗರಸಭೆಯಲ್ಲಿ ಮತ್ತೊಮ್ಮೆ ಬಿಜೆಪಿ ತನ್ನ ಪ್ರಾಬಲ್ಯ ಮೆರೆದಿದ್ದು , ಒಟ್ಟು 31 ಸದಸ್ಯ ಬಲದಲ್ಲಿ 16 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಿದೆ.
ಪ್ರಬಲ ಪೈಪೋಟಿಯ ನಡುವೆಯೂ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಿರುವುದು ಕಾರ್ಯಕರ್ತರಲ್ಲಿ ಹರ್ಷೋದ್ಘಾರ ಮುಗಿಲು ಮುಟ್ಟಿದೆ. ಕಾಂಗ್ರೆಸ್ 9 ಸ್ಥಾನಗಳನ್ನು ಪಡೆದರೆ ಪಕ್ಷೇತರರು 5 ಸ್ಥಾನದಲ್ಲಿ ಗೆದ್ದಿದ್ದಾರೆ. ಜೆಡಿಎಸ್ ಇಲ್ಲಿ ಕೇವಲ ಒಂದು ಸ್ಥಾನವನ್ನು ಮಾತ್ರ ಗೆದ್ದುಕೊಂಡಿದೆ.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಶಿಕಾರಿಪುರ ಪುರಸಭೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…