ಉಡುಪಿ: ಮೋಸ್ಟ್ ವಾಂಟೆಡ್ ನಕ್ಸಲೈಟ್ ಶ್ರೀಮತಿ ಅಲಿಯಾಸ್ ಉನ್ನಿಮಾಯಳನ್ನು ಪೊಲೀಸರು ಕಾರ್ಕಳಕ್ಕೆಕರೆ ತಂದಿದ್ದಾರೆ. 2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ ಸದಾಶಿವ ಗೌಡನ ಅಪಹರಣ, ಹತ್ಯೆ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಶ್ರೀಮತಿಯನ್ನು ಪೊಲೀಸರು ಕಾರ್ಕಳಕ್ಕೆ ಕರೆತಂದಿದ್ದಾರೆ.
ಹಲವು ವರ್ಷಗಳಿಂದ ಕರ್ನಾಟಕ ಮತ್ತು ಕೇರಳ ರಾಜ್ಯದ ಪೊಲೀಸರಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ನಕ್ಸಲ್ ನಾಯಕಿ ಮೂಲತಃ ಶೃಂಗೇರಿ ನಿವಾಸಿ ಶ್ರೀಮತಿ@ಉಣ್ಣಿಮಾಯಾ(28) ಕಳೆದ ನವೆಂಬರ್ 7 ರಂದು ಕೇರಳ ಪೊಲೀಸರಿಗೆ ಸೆರೆಸಿಕ್ಕಿದ್ದು. ನಂತರ ಈಕೆ ಕೇರಳ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಳುಈಕೆ ಕೇರಳದ ವಯನಾಡು ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಸೆರೆಯಾಗಿದ್ದಳು.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೆಳಗೋಡುಕೊಡಿಗೆ ನಿವಾಸಿಯಾಗಿರುವ ಶ್ರೀಮತಿ ಕೇರಳ-ಕರ್ನಾಟಕ ಗಡಿಭಾಗದಲ್ಲಿ ಆ್ಯಕ್ಟಿವ್ ಆಗಿದ್ದಳು. ಸದಾಶಿವ ಗೌಡ ಹತ್ಯೆ ನಡೆಸಿದ ಕಾರ್ಕಳ ವ್ಯಾಪ್ತಿಯ ಕಬ್ಬಿನಾಲೆಗೆ ಬಾಡಿ ವಾರೆಂಟ್ ಮೇಲೆ ಶ್ರೀಮತಿಯನ್ನು ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಶ್ರೀಮತಿ ಕರೆ ತಂದು ಘಟನಾ ಸ್ಥಳದಲ್ಲಿ ಮಹಜರು ನಡೆಸಿದ್ದಾರೆ. ಶ್ರೀಮತಿ ಮೇಲೆ ರಾಜ್ಯದ ಹಲವು ಠಾಣೆಗಳಲ್ಲಿ 9 ಪ್ರಕರಣಗಳಿವೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…