ಕೊಲ್ಕತ್ತಾ: ಪಶ್ಚಿಮ ಬಂಗಾಳದ ಬರುಯಿಪುರ್ ನಲ್ಲಿ 12 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿಯೋರ್ವ ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ಸಂದರ್ಭ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಆರೋಪಿ ಪ್ರಬಾಶ್ ಮಂಡಲ್ ನನ್ನು ಸ್ಥಳಮಜರು ನಡೆಸಲು ಘಟನಾ ಸ್ಥಳಕ್ಕೆ ಕರೆದೊಯ್ಯುವಾಗ ಪೊಲೀಸ್ ವಶದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಜೊತೆಗ ಆತ ಆತ ಪೊಲೀಸ್ ಸಿಬ್ಬಂದಿಯೊಬ್ಬರ ಬಂದೂಕನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ. ಹಾಗೂ ಆರೋಪಿಯು ಪರಾರಿಯಾಗುವ ವೇಳೆ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದರಿಂದ ಆತ್ಮರಕ್ಷಣೆಗಾಗಿ ಪೊಲೀಸರು ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಆರೋಪಿ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಆರೋಪಿ ಪ್ರಬಾಶ್ ಮಂಡಲ್ 12 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ. ಅಪರಾಧ ನಡೆಯುವ ಮುನ್ನ ಬಾಲಕಿಯೊಂದಿಗೆ ಆರೋಪಿಯು ಕಾಣಿಸಿಕೊಂಡಿದ್ದು, ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…