Featured

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಬರುಯಿಪುರ್ ನಲ್ಲಿ 12 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿಯೋರ್ವ ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ಸಂದರ್ಭ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ ಘಟನೆ ಬುಧವಾರ ಮುಂಜಾನೆ ನಡೆದಿದೆ.

ಆರೋಪಿ ಪ್ರಬಾಶ್ ಮಂಡಲ್ ನನ್ನು ಸ್ಥಳಮಜರು ನಡೆಸಲು ಘಟನಾ ಸ್ಥಳಕ್ಕೆ ಕರೆದೊಯ್ಯುವಾಗ ಪೊಲೀಸ್ ವಶದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಜೊತೆಗ ಆತ ಆತ ಪೊಲೀಸ್ ಸಿಬ್ಬಂದಿಯೊಬ್ಬರ ಬಂದೂಕನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ. ಹಾಗೂ ಆರೋಪಿಯು ಪರಾರಿಯಾಗುವ ವೇಳೆ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದರಿಂದ ಆತ್ಮರಕ್ಷಣೆಗಾಗಿ ಪೊಲೀಸರು ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಆರೋಪಿ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಆರೋಪಿ ಪ್ರಬಾಶ್ ಮಂಡಲ್ 12 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ. ಅಪರಾಧ ನಡೆಯುವ ಮುನ್ನ ಬಾಲಕಿಯೊಂದಿಗೆ ಆರೋಪಿಯು ಕಾಣಿಸಿಕೊಂಡಿದ್ದು, ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

3 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

3 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

3 hours ago

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

18 hours ago