ತುಮಕೂರು: ತುಮಕೂರಿನ ಜಾತ್ರೆಗೆ ಸ್ನೇಹಿತನೊಂದಿಗೆ ಬಂದಿದ್ದ ಬಾಲಕಿ ನಂತರ ಪಕ್ಕದಲ್ಲಿಯೇ ಇದ್ದ ಬೆಟ್ಟದ ಬಳಿಗೆ ಮಾತನಾಡಲು ಹೋಗಿದ್ದಾರೆ. ಇವರನ್ನು ಹಿಂಬಾಲಿಸಿಕೊಂಡು ಹೋದ ಕಿಡಿಗೇಡಿಗಳು ಅವರು ಕುಳಿತಿದ್ದ ವಿಡಿಯೋವನ್ನು ಮಾಡಿ ತೋರಿಸಿ ಬೆದರಿಸಿದ್ದಾರೆ. ನಂತರ, ಬಾಲಕಿಯನ್ನು ಎಳೆದೊಯ್ದು ಮನೆಯೊಂದರಲ್ಲಿ ಕೂಡಿಹಾಕಿ ಅತ್ಯಾಚಾರ ಮಾಡಿದ್ದಾರೆ.
ಜಾತ್ರೆಗೆ ಸಾವಿರಾರು ಜನರು ಆಗಮಿಸುತ್ತಾರೆ. ಈ ವೇಳೆ ಮಹಿಳೆಯರು, ಯುವತಿಯರು ಹಾಗೂ ಬಾಲಕಿಯರಿಗೆ ಬೆಟ್ಟದ ಕಡೆಗೆ ಹೋಗದಂತೆ ಪೊಲೀಸು ನಿಗಾವಹಿಸಿರುತ್ತಾರೆ. ಆದರೂ, ಪೊಲೀಸರ ಕಣ್ಣು ತಪ್ಪಿಸಿ ಹೋಗುವವರ ಸಂಖ್ಯೆಯೂ ಹೆಚ್ಚಿದೆ. ಹೀಗೆ, ತನ್ನ ಬಾಯ್‌ಫ್ರೆಂಡ್‌ನೊಂದಿಗೆ ಜಾತ್ರೆಗೆ ಬಂದ ಬಾಲಕಿಯೂ ಕೂಡ ಬೆಟ್ಟದ ಬಳಿ ಹೋಗಿ ಮಾತನಾಡಲು ಕುಳಿತಿದ್ದಾರೆ. ಅವರನ್ನು ಹಿಂಬಾಲಿಸಿಕೊಂಡು ಹೋಗಿ ಮೊಬೈಲ್‌ನಲ್ಲಿ ವಿಡಿಯೋ ಸೆರೆ ಹಿಡಿದು ಅದನ್ನು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದಾರೆ. ನಂತರ, ಆಕೆಯ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಯುವತಿಯನ್ನು ಬಂಡೇಪಾಳ್ಯದ ಮನೆಯೊಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.
ಇನ್ನು ಬಾಲಕಿ ಅಪ್ರಾಪ್ತಳಾಗಿದ್ದು, ಅವರು ಸಮೂಹಿಕ ಅತ್ಯಾಚಾರ ಮಾಡುವ ವಿಡಿಯೋವನ್ನು ಕೂಡ ಮೊಬೈಲ್‌ನಲ್ಲಿ ರೆಕಾರ್ಟ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ನಂತರ, ಯುವತಿಗೆ ನಿನ್ನ ವಿಡಿಯೋ ಬಿಡುಗಡೆ ಮಾಡುವುದಾಗಿ ಹಾಗೂ ಹಲ್ಲೆ ಮಾಡುವುದಾಗಿ ಬೆದರಿಸಿ ಅಲ್ಲಿಂದ ಕಳಿಸಿದ್ದಾರೆ. ತೀವ್ರ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಪೋಷಕರು ವಿಚಾರಣೆ ಮಾಡಿದಾದ ಸಾಮೂಹಿಕ ಅತ್ಯಾಚಾರ ಆಗಿರುವುದನ್ನು ಹೇಳಿದ್ದಾಳೆ. ಕೂಡಲೇ, ಪೋಷಕರು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸಾಮೂಹಿಕ ಅತ್ಯಾಚಾರದ ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿಗಳ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡು ಶೋಧ ಕಾರ್ಯ ಆರಂಭಿಸಿದ್ದಾರೆ. ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಈ ಪ್ರಕರಣದ ಸಂಬಂಧ ಪೊಲೀಸರು ಮೂವರನ್ನ ಬಂಧಿಸಿದ್ದಾರೆ. ಬಂಡೆಪಾಳ್ಯದಲ್ಲಿ ವಾಸವಿದ್ದ ಅಮೋಘ, ಹನುಮಂತ, ಪ್ರತಾಪ್ ಎಂಬಾತನನ್ನ ಪೊಲೀಸರು ಬಂಧಿಸಿ ಜೈಲಿಹಟ್ಟಿದ್ದಾರೆ. ಇನ್ನು ಪ್ರಕರಣ ಸಂಬಂಧ ಪೊಲೀಸರಿಂದ ತನಿಖೆ ಮುಂದುವರಿದಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…