ಸ್ನೇಹಿತರ ಜೊತೆ ಮದ್ಯ ಸೇವಿಸಿದ 13ರ ಬಾಲಕ ; ಅಪ್ಪನಿಗೆ ಗೊತ್ತಾದ್ರೆ ಬೈತ್ತಾರೆ ಎಂದು ಆತ್ಮಹತ್ಯೆ – vishwanews24

Featured, ರಾಜ್ಯ ನ್ಯೂಸ್

ಸ್ನೇಹಿತರ ಜೊತೆ ಮದ್ಯ ಸೇವಿಸಿದ 13ರ ಬಾಲಕ ; ಅಪ್ಪನಿಗೆ ಗೊತ್ತಾದ್ರೆ ಬೈಯುತ್ತಾರೆ ಎಂದು ಆತ್ಮಹತ್ಯೆ

ಚಿಕ್ಕಮಗಳೂರು: ಮದುವೆ ಕಾರ್ಯಕ್ರಮವೊಂದರಲ್ಲಿ ಸ್ನೇಹಿತರ ಜೊತೆ ಡ್ರಿಂಕ್ಸ್ ಮಾಡಿದ 13 ಬಾಲಕ ಬಳಿಕ ಈ ವಿಷಯ ಅಪ್ಪನಿಗೆ ಗೊತ್ತಾದ್ರೆ ಬೈಯುತ್ತಾರೆ ಎಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮೇಲ್ಪಾಲ್ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕ 13 ವರ್ಷದ ಮೇಲ್ಪಾಲ್ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ. ಮೇಲ್ಪಾಲ್ ಗ್ರಾಮದಲ್ಲಿ ಅದೇ ಗ್ರಾಮಸ್ಥರ ಮದುವೆ ಕಾರ್ಯಕ್ರಮವಿತ್ತು. ಮದುವೆಗೆ ಬಾಲಕ ಸೇರಿ ಪೋಷಕರು ಹೋಗಿದ್ದರು.

ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು – vishwanews24

ಈ ವೇಳೆ ಮದುವೆಯಲ್ಲಿ ಸ್ನೇಹಿತರ ಜೊತೆ ಸೇರಿ ಮದ್ಯ ಸೇವಿಸಿದ್ದಾನೆ. ಮದ್ಯ ಸೇವಿಸಿದ ಬಳಿಕ ಕುಡಿದಿರುವುದು ಅಪ್ಪನಿಗೆ ಗೊತ್ತಾದರೆ ಬೈಯುತ್ತಾರೆ ಎಂದು ಮನೆ ಬಳಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನ ಗಮನಿಸಿದ ಪೋಷಕರು ಕೂಡಲೇ ಆತನನ್ನ ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲೇ ಬಾಲಕ ಶರಣ್ ಸಾವನ್ನಪ್ಪಿದ್ದಾನೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಪರ್ಕಳ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ – vishwanews24

Leave a Reply