ಹಾಸನ: ಸ್ನೇಹಿತೆಯರ ಜೊತೆ ಪಾರ್ಕ್‌ನಲ್ಲಿದ್ದ ವೀಡಿಯೋವನ್ನು ಇನ್ಸ್ಟಾದಲ್ಲಿ ಅಪ್‌ಲೋಡ್ ಮಾಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ತಾಲೂಕಿನ, ಕಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೊಸಳೆಹೊಸಳ್ಳಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿಎ ವಿದ್ಯಾರ್ಥಿ ಪವನ್.ಕೆ (21) ಮೃತ ದುರ್ದೈವಿ.
ಸೆ. 17ರಂದು ಮಧ್ಯಾಹ್ನ ಹಾಸನದ ಮಹಾರಾಜ ಪಾರ್ಕ್‌ನಲ್ಲಿ ಪವನ್, ಇಬ್ಬರು ಸ್ನೇಹಿತೆಯರ ಜೊತೆ ಕುಳಿತಿದ್ದ. ಈ ವೇಳೆ ಓರ್ವ ಯುವತಿಯ ಕೈ ಹಿಡಿದು ಪವನ್ ಆತ್ಮೀಯತೆಯಿಂದ ಮಾತನಾಡುತ್ತಿದ್ದ. ಈ ದೃಶ್ಯವನ್ನು ಅಪರಿಚಿತ ಯುವತಿಯೊಬ್ಬಳು ಮೊಬೈಲ್‌ನಲ್ಲಿ ಸೆರೆ ಹಿಡಿದು, ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹರಿಬಿಟ್ಟಿದ್ದಳು.
ಈ ಬಗ್ಗೆ ಯುವತಿಯು ಸಾಕಷ್ಟು ಟೀಕೆ ಜೊತೆಗೆ ವ್ಯಂಗ್ಯ ಸಂಭಾಷಣೆ ಮಾಡಿ ವೀಡಿಯೋ ಅಪ್‌ಲೋಡ್ ಮಾಡಿದ್ದಳು. ಈ ವೀಡಿಯೋವನ್ನು ಪವನ್ ಸಹಪಾಠಿಗಳು ಸೇರಿದಂತೆ ಅನೇಕರು ವೀಕ್ಷಣೆ ಮಾಡಿದ್ದರು. ಇದರಿಂದ ನನ್ನೊಂದಿಗಿದ್ದ ಯುವತಿಯರಿಗೆ ಏನಾದರೂ ತೊಂದರೆ ಆಗಲಿದೆ ಎಂದು ಭಾವಿಸಿ ಇನ್ಸ್ಟಾದಿಂದ ವೀಡಿಯೋ ಡಿಲೀಟ್ ಮಾಡಿಸಲು ಪವನ್ ಸಾಕಷ್ಟು ಪ್ರಯತ್ನ ಪಟ್ಟಿದ್ದ.
ಆದರೆ ಅದು ಸಾಧ್ಯವಾಗದೇ ಇದ್ದಾಗ, ಗುರುವಾರ ಕಾಲೇಜು ಮುಗಿಸಿ ಮನೆಗೆ ಹೋಗಿದ್ದ ಪವನ್, ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪತಿ ಕಳೆದುಕೊಂಡು ಗಾರೆ ಕೆಲಸ ಮಾಡಿ ಮಗನನ್ನು ಸಾಕುತ್ತಿದ್ದ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ.
ಪವನ್ ಸಾವಿಗೆ ಕಾರಣಳಾದ ಅಪರಿಚಿತ ಯುವತಿಯನ್ನು ಬಂಧಿಸುವಂತೆ ಪವನ್ ಕುಟುಂಬಸ್ಥರು ಆಗ್ರಹಿಸಿದ್ದು, ಮುಂದೆ ಯಾರಿಗೂ ಇಂತಹ ಮಾನಹಾನಿ ಆಗಬಾರದು. ಇದನ್ನು ತಡೆಯಬೇಕೆಂದು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಗೊರೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…