Featured

ಸ್ನೇಹಿತೆಯರ ಜೊತೆಗಿದ್ದ ವೀಡಿಯೋ ಇನ್‌ಸ್ಟಾದಲ್ಲಿ ಪೋಸ್ಟ್ ಮಾಡಿದ ಅಪರಿಚಿತ ಯುವತಿ : ಮನನೊಂದು ಯುವಕ ಆತ್ಮಹತ್ಯೆ – vishwanews24

ಸ್ನೇಹಿತೆಯರ ಜೊತೆಗಿದ್ದ ವೀಡಿಯೋ ಇನ್‌ಸ್ಟಾದಲ್ಲಿ ಪೋಸ್ಟ್ ಮಾಡಿದ ಅಪರಿಚಿತ ಯುವತಿ : ಮನನೊಂದು ಯುವಕ ಆತ್ಮಹತ್ಯೆ

ಹಾಸನ: ಸ್ನೇಹಿತೆಯರ ಜೊತೆ ಪಾರ್ಕ್‌ನಲ್ಲಿದ್ದ ವೀಡಿಯೋವನ್ನು ಇನ್ಸ್ಟಾದಲ್ಲಿ ಅಪ್‌ಲೋಡ್ ಮಾಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ  ತಾಲೂಕಿನ, ಕಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೊಸಳೆಹೊಸಳ್ಳಿ  ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿಎ ವಿದ್ಯಾರ್ಥಿ ಪವನ್.ಕೆ (21) ಮೃತ ದುರ್ದೈವಿ.

ಸೆ. 17ರಂದು ಮಧ್ಯಾಹ್ನ ಹಾಸನದ ಮಹಾರಾಜ ಪಾರ್ಕ್‌ನಲ್ಲಿ ಪವನ್, ಇಬ್ಬರು ಸ್ನೇಹಿತೆಯರ ಜೊತೆ ಕುಳಿತಿದ್ದ. ಈ ವೇಳೆ ಓರ್ವ ಯುವತಿಯ ಕೈ ಹಿಡಿದು ಪವನ್ ಆತ್ಮೀಯತೆಯಿಂದ ಮಾತನಾಡುತ್ತಿದ್ದ. ಈ ದೃಶ್ಯವನ್ನು ಅಪರಿಚಿತ ಯುವತಿಯೊಬ್ಬಳು ಮೊಬೈಲ್‌ನಲ್ಲಿ ಸೆರೆ ಹಿಡಿದು, ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹರಿಬಿಟ್ಟಿದ್ದಳು.

ಈ ಬಗ್ಗೆ ಯುವತಿಯು ಸಾಕಷ್ಟು ಟೀಕೆ ಜೊತೆಗೆ ವ್ಯಂಗ್ಯ ಸಂಭಾಷಣೆ ಮಾಡಿ ವೀಡಿಯೋ ಅಪ್‌ಲೋಡ್ ಮಾಡಿದ್ದಳು. ಈ ವೀಡಿಯೋವನ್ನು ಪವನ್ ಸಹಪಾಠಿಗಳು ಸೇರಿದಂತೆ ಅನೇಕರು ವೀಕ್ಷಣೆ ಮಾಡಿದ್ದರು. ಇದರಿಂದ ನನ್ನೊಂದಿಗಿದ್ದ ಯುವತಿಯರಿಗೆ ಏನಾದರೂ ತೊಂದರೆ ಆಗಲಿದೆ ಎಂದು ಭಾವಿಸಿ ಇನ್ಸ್ಟಾದಿಂದ ವೀಡಿಯೋ ಡಿಲೀಟ್ ಮಾಡಿಸಲು ಪವನ್ ಸಾಕಷ್ಟು ಪ್ರಯತ್ನ ಪಟ್ಟಿದ್ದ.

ಆದರೆ ಅದು ಸಾಧ್ಯವಾಗದೇ ಇದ್ದಾಗ, ಗುರುವಾರ ಕಾಲೇಜು ಮುಗಿಸಿ ಮನೆಗೆ ಹೋಗಿದ್ದ ಪವನ್, ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪತಿ ಕಳೆದುಕೊಂಡು ಗಾರೆ ಕೆಲಸ ಮಾಡಿ ಮಗನನ್ನು ಸಾಕುತ್ತಿದ್ದ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ.

ಪವನ್ ಸಾವಿಗೆ ಕಾರಣಳಾದ ಅಪರಿಚಿತ ಯುವತಿಯನ್ನು ಬಂಧಿಸುವಂತೆ ಪವನ್ ಕುಟುಂಬಸ್ಥರು ಆಗ್ರಹಿಸಿದ್ದು, ಮುಂದೆ ಯಾರಿಗೂ ಇಂತಹ ಮಾನಹಾನಿ ಆಗಬಾರದು. ಇದನ್ನು ತಡೆಯಬೇಕೆಂದು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಗೊರೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago