ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದ್ದು ಮೂಲಗಳ ಪ್ರಕಾರ ಅವರು ಮಂಗಳವಾರ ನಾಮ ಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ.
ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್. ವಿ ದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಹಂಗಾಮಿ ಸ್ಪೀಕರ್ ವಿಶ್ರಾಂತಿ ಹೋದ ಸಂದರ್ಭದಲ್ಲಿ ಪೀಠದಲ್ಲಿ ಸೋಮವಾರ ಕೆಲ ಹೊತ್ತು ಯು.ಟಿ ಖಾದರ್ ಅವರು ಕುಳಿತುಕೊಂಡಿದ್ದರು.
ಇದೀಗ ಅಚ್ಚರಿ ಎಂಬಂತೆ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದೆ.ಸೋಮವಾರ ರಾತ್ರಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರೆ ಮಾಡಿ ಮೊದಲ ಎರಡು ವರ್ಷಗಳಿಗೆ ಸ್ಪೀಕರ್ ಹುದ್ದೆಯನ್ನು ಅಲಂಕರಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಖಾದರ್ ಕೂಡಾ ತನ್ನ ಒಪ್ಪಿಗೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.
ಸ್ಪೀಕರ್ ಹುದ್ದೆಗೆ ಸಂಬಂಧಿಸಿ ಹಲವು ಹಿರಿಯರ ಹೆಸರು ಕೇಳಿಬಂದಿತ್ತು. ಆದರೆ ಮಂತ್ರಿ ಹುದ್ದೆಗೆ ಪಟ್ಟು ಹಿಡಿದು ಅವರ್ಯಾರು ಒಪ್ಪದ ಕಾರಣ ಯು.ಟಿ ಖಾದರ್ ಹೆಸರು ಅಂತಿಮವಾಗಿದೆ. ಬುಧವಾರ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಮಂಗಳವಾರ ಖಾದರ್ ಉಮೇದುವಾರಿಕೆ ಸಲ್ಲಿಸಲಿದ್ದಾರೆ.
ಸಚಿವರಾಗಿ ಅನುಭವಾಗಿಯುರವ ಇವರು 2021 ರಲ್ಲಿ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಆಯ್ಕೆಯಾಗಿ 2023 ರ ವರೆಗೆ ಕಾರ್ಯ ನಿರ್ವಹಿಸಿ ಸರಕಾರದ ನ್ಯೂನತೆಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಗಮನ ಸೆಳೆದಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…