Featured

ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ರಾಜೀನಾಮೆ -Vishwanews24

ಬೆಂಗಳೂರು: ವಿಧಾನಸಭೆಯಲ್ಲಿ ಧನವಿನಿಯೋಗ ವಿಧೇಯಕ ಅಂಗೀಕಾರವಾದ ನಂತರ ವಿಧಾನಸಭಾಧ್ಯಕ್ಷ ಕೆ.ಆರ್​. ರಮೇಶ್​ ಕುಮಾರ್​ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಮೈತ್ರಿ ಸರಕಾರ ಅಧಿಕಾರಕ್ಕೆ ಬಂದಾಗ ನನ್ನ ಸರ್ವಾನುಮತದಿಂದ ಸ್ಪೀಕರ್ ಆಗಿ ನೇಮಕ ಮಾಡಿದ್ದಾರೆ. 14 ತಿಂಗಳಿನಿಂದ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದೇನೆ. ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ಸೋಮವಾರ ವಿಧಾನಸಭೆ ಕಲಾಪದಲ್ಲಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರು ವಿಶ್ವಾಸಮತ ಪ್ರಸ್ತಾಪವನ್ನು ಮಂಡಿಸಿದರು. ಧ್ವನಿಮತದ ಮೂಲಕ ಬಿಎಸ್​ವೈ ವಿಶ್ವಾಸ ಮತವನ್ನು ಗೆದ್ದರು.

ಆನಂತರ ಸಿಎಂ ಧನವಿನಿಯೋಗ ವಿಧೇಯಕವನ್ನು ಮಂಡಿಸಿದರು. ಹೆಚ್ಚಿನ ಚರ್ಚೆ ಇಲ್ಲದೆ ಆ ವಿಧೇಯಕವು ಅಂಗೀಕಾರಗೊಂಡಿತು. ಇದಾದ ಬಳಿಕ ವಿದಾಯ ಭಾಷಣ ಆರಂಭಿಸಿದ ರಮೇಶ್​ ಕುಮಾರ್​ ತಾವು ರಾಜೀನಾಮೆ ನೀಡುವ ತೀರ್ಮಾನವನ್ನು ಪ್ರಕಟಿಸಿದರು.

ನನ್ನ ಸಿಬ್ಬಂದಿಗಳಿಗೆ, ನನ್ನ ಎಲ್ಲಾ ಕಾರ್ಯದರ್ಶಿಗಳಿಗೆ, ಡಿ ಗ್ರೂಪ್ ನೌಕರರಿಗೆ, ಕೃತಜ್ಞತೆಯನ್ನು ತಿಳಿಸುತ್ತಾ ಹೆಚ್ ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾದಾಗ, ಸೋನಿಯಾಗಾಂಧಿಯವರು ಕರೆಮಾಡಿ ತಾವು ಸ್ಪೀಕರ್ ಆಗುವಂತೆ ಸೂಚಿಸಿದ್ದರು. ಹೀಗಾಗಿ ಆ ಸ್ಥಾನವನ್ನು ಅಲಂಕರಿಸಿದೆ. ಅವರಿಗೆಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ.

ಮೀಡಿಯಾದವರಿಗೆ, ಒಂದು ಮನವಿ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಸಾರ್ವಜನಿಕ ಬದುಕಿನಲ್ಲಿ ಇರುವವ ವೈಯಕ್ತಿಕ ಜೀವನದ ಬಗ್ಗೆ ಸುದ್ದಿ ಮಾಡುವ ಮೊದಲು, ನಿಮ್ಮಲ್ಲಿ ಕೈಮುಗಿದು ಬೇಡಿಕೊಳ್ಳುತ್ತೇನೆ. ಅಂತಹ ಕೆಲಸವನ್ನು ಮಾಡಬಾರದು ಎಂದು ರಮೇಶ್ ಕುಮಾರ್ ಮನವಿ ಮಾಡಿಕೊಂಡರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago