Featured

ಸ್ಪೀಡ್ ಗವರ್ನರ್, ಬಾಗಿಲು ಅಳವಡಿಸದ ಲಾರಿ, ಬಸ್‌ಗಳ ವಿರುದ್ಧ ಕ್ರಮ: ಉಡುಪಿ ಪೊಲೀಸರಿಂದ ವಿಶೇಷ ಕಾರ್ಯಾಚರಣೆ – vishwanews24

ಸ್ಪೀಡ್ ಗವರ್ನರ್, ಬಾಗಿಲು ಅಳವಡಿಸದ ಲಾರಿ, ಬಸ್‌ಗಳ ವಿರುದ್ಧ ಕ್ರಮ: ಉಡುಪಿ ಪೊಲೀಸರಿಂದ ವಿಶೇಷ ಕಾರ್ಯಾಚರಣೆ

ಉಡುಪಿ: ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಬಾಗಿಲು ಅಳವಡಿಸದ ಬಸ್‌ಗಳು ಹಾಗೂ ವೇಗನಿಯಂತ್ರಕ ಅಳವಡಿಸಲಾದ ಲಾರಿಗಳ ವಿರುದ್ಧ ಪೊಲೀಸರು ಕಾರ್ಯಾ ಚರಣೆ ಆರಂಭಿಸಿದ್ದು, ಈ ಸಂಬಂಧ ಹಲವು ವಾಹನಗಳಿಗೆ ದಂಡ ವಿಧಿಸಲಾಗಿದೆ.

ಬಸ್‌ಗಳಿಗೆ ಬಾಗಿಲು ಅಳವಡಿಸುವಂತೆ ಹಾಗೂ ಮರಳು ಸಾಗಾಟದ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿ ಸುವ ಬಗ್ಗೆ ಗಡುವು ನೀಡಲಾಗಿತ್ತು. ಇದೀಗ ಈ ಅವಧಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಈ ವಿಶೇಷ ಕಾರ್ಯಾ ಚರಣೆಗೆ ಮುಂದಾಗಿದ್ದಾರೆ.

ಅದರಂತೆ ಬುಧವಾರ ಜಿಲ್ಲೆಯ ವಿವಿಧೆಡೆ ಪೊಲೀಸರು ಕಾರ್ಯಾಚರಣೆ ನಡೆಸಿ, ಒಟ್ಟು 1100 ಬಸ್‌ಗಳನ್ನು ಪರಿಶೀಲನೆ ನಡೆಸಿದರು. ಇದರಲ್ಲಿ ಬಾಗಿಲು ಅಳವಡಿಸದಿರುವುದು ಸೇರಿದಂತೆ ವಿವಿಧ ನಿಯಮ ಉಲ್ಲಂಘನೆ ಮಾಡಿರುವ ಸುಮಾರು 108 ಬಸ್‌ಗಳಿಗೆ ದಂಡ ವಿಧಿಸಲಾಗಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಅದೇ ರೀತಿ ಮರಳು, ಕಲ್ಲು, ಮಣ್ಣು ಸಾಗಾಟ ಮಾಡುವ ಒಟ್ಟು 1352 ವಾಹನಗಳನ್ನು ಪರಿಶೀಲನೆ ನಡೆಸಿದ್ದು, ಇದರಲ್ಲಿ ಓವರ್ ಲೋಡ್, ವೇಗ ನಿಯಂತ್ರಕಗಳನ್ನು ಅಳವಡಿಸದಿರುವುದು ಸೇರಿದಂತೆ ವಿವಿಧ ನಿಯಮ ಉಲ್ಲಂಘನೆ ಮಾಡಿರುವ ಸುಮಾರು 56 ವಾಹನಗಳಿಗೆ ದಂಡ ವಿಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಜ.29ರಂದು ಮಧ್ಯಾಹ್ನ 3 ಗಂಟೆಗೆ ನಗರ ಬಸ್ ಮಾಲೀಕರೊಂದಿಗೆ ಬಸ್ ಸಮಯದ ವಿಚಾರ ಹಾಗೂ ಇತರ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ಕರೆದಿದ್ದಾರೆ.

ರಸ್ತೆ ಸಾರಿಗೆ ಪ್ರಾಧಿಕಾರ ಹಾಗೂ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಯಿಂದ ತೆಗೆದುಕೊಳ್ಳಲಾದ ತೀರ್ಮಾನ ಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಬಸ್ ಹಾಗೂ ಲಾರಿಗಳ ವಿರುದ್ಧ ಈ ರೀತಿಯ ಕಾರ್ಯಾಚರಣೆಗಳನ್ನು ಹಂತ ಹಂತವಾಗಿ ಮುಂದುವರಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago