ಉಡುಪಿ: ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಬಾಗಿಲು ಅಳವಡಿಸದ ಬಸ್‌ಗಳು ಹಾಗೂ ವೇಗನಿಯಂತ್ರಕ ಅಳವಡಿಸಲಾದ ಲಾರಿಗಳ ವಿರುದ್ಧ ಪೊಲೀಸರು ಕಾರ್ಯಾ ಚರಣೆ ಆರಂಭಿಸಿದ್ದು, ಈ ಸಂಬಂಧ ಹಲವು ವಾಹನಗಳಿಗೆ ದಂಡ ವಿಧಿಸಲಾಗಿದೆ.
ಬಸ್‌ಗಳಿಗೆ ಬಾಗಿಲು ಅಳವಡಿಸುವಂತೆ ಹಾಗೂ ಮರಳು ಸಾಗಾಟದ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿ ಸುವ ಬಗ್ಗೆ ಗಡುವು ನೀಡಲಾಗಿತ್ತು. ಇದೀಗ ಈ ಅವಧಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಈ ವಿಶೇಷ ಕಾರ್ಯಾ ಚರಣೆಗೆ ಮುಂದಾಗಿದ್ದಾರೆ.
ಅದರಂತೆ ಬುಧವಾರ ಜಿಲ್ಲೆಯ ವಿವಿಧೆಡೆ ಪೊಲೀಸರು ಕಾರ್ಯಾಚರಣೆ ನಡೆಸಿ, ಒಟ್ಟು 1100 ಬಸ್‌ಗಳನ್ನು ಪರಿಶೀಲನೆ ನಡೆಸಿದರು. ಇದರಲ್ಲಿ ಬಾಗಿಲು ಅಳವಡಿಸದಿರುವುದು ಸೇರಿದಂತೆ ವಿವಿಧ ನಿಯಮ ಉಲ್ಲಂಘನೆ ಮಾಡಿರುವ ಸುಮಾರು 108 ಬಸ್‌ಗಳಿಗೆ ದಂಡ ವಿಧಿಸಲಾಗಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ಅದೇ ರೀತಿ ಮರಳು, ಕಲ್ಲು, ಮಣ್ಣು ಸಾಗಾಟ ಮಾಡುವ ಒಟ್ಟು 1352 ವಾಹನಗಳನ್ನು ಪರಿಶೀಲನೆ ನಡೆಸಿದ್ದು, ಇದರಲ್ಲಿ ಓವರ್ ಲೋಡ್, ವೇಗ ನಿಯಂತ್ರಕಗಳನ್ನು ಅಳವಡಿಸದಿರುವುದು ಸೇರಿದಂತೆ ವಿವಿಧ ನಿಯಮ ಉಲ್ಲಂಘನೆ ಮಾಡಿರುವ ಸುಮಾರು 56 ವಾಹನಗಳಿಗೆ ದಂಡ ವಿಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಜ.29ರಂದು ಮಧ್ಯಾಹ್ನ 3 ಗಂಟೆಗೆ ನಗರ ಬಸ್ ಮಾಲೀಕರೊಂದಿಗೆ ಬಸ್ ಸಮಯದ ವಿಚಾರ ಹಾಗೂ ಇತರ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ಕರೆದಿದ್ದಾರೆ.
ರಸ್ತೆ ಸಾರಿಗೆ ಪ್ರಾಧಿಕಾರ ಹಾಗೂ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಯಿಂದ ತೆಗೆದುಕೊಳ್ಳಲಾದ ತೀರ್ಮಾನ ಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಬಸ್ ಹಾಗೂ ಲಾರಿಗಳ ವಿರುದ್ಧ ಈ ರೀತಿಯ ಕಾರ್ಯಾಚರಣೆಗಳನ್ನು ಹಂತ ಹಂತವಾಗಿ ಮುಂದುವರಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…