ಬೆಂಗಳೂರು: ಸ್ಪ್ರೇ ಸಿಂಪಡಿಸಿ ಕಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದು, ಮಹಿಳೆ ಸಾವನ್ನಪ್ಪಿದ ಘಟನೆ ನೆಲಮಂಗಲ ಬಳಿಯ ಹುಸ್ಕೂರು ಗ್ರಾಮದಲ್ಲಿ ನಡೆದಿದೆ.
ಜ್ಯೋತಿ (45) ಮೃತ ಮಹಿಳೆ. ಜ್ಯೋತಿ ಬೆಳಗ್ಗೆ ಎದ್ದು ಮನೆಯ ಮುಂದೆ ಕಸ ಗುಡಿಸುವ ವೇಳೆ ಬೈಕ್‌ನಲ್ಲಿ ಬಂದ ಕಳ್ಳರು ಮಹಿಳೆಗೆ ಸ್ಪ್ರೇ ಸಿಂಪಡಿಸಿ ಆಕೆಯ ಕೊರಳಲ್ಲಿದ್ದ 70 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಸ್ಪ್ರೇ ಸಿಂಪಡಿಸಿದ ಪರಿಣಾಮ ಮಹಿಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: 👇🏼
ಕೂಡಲೇ ಮಹಿಳೆಯನ್ನು ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮಹಿಳೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮರಣೋತ್ತರ ಪರೀಕ್ಷೆಗೆ ಜ್ಯೋತಿ ಮೃತದೇಹವನ್ನು ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…