ಪಾಲಕ್ಕಾಡ್: ಅನಾನಸ್ ನಲ್ಲಿ ಸ್ಫೋಟಕ ತುಂಬಿಸಿ ಆನೆಗೆ ತಿನ್ನಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಆರೋಪಿಯೋರ್ವನನ್ನು ಬಂಧಿಸಿದ್ದು, ಈ ಪ್ರಕರಣದಲ್ಲಿ ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ವ್ಯಕ್ತಿಯು, ಕೆಲಸ ಮಾಡುತ್ತಿದ್ದ ತೋಟದ ಬಳಿಯಲ್ಲಿ ಆನೆ ಕಾಣಿಸಿಕೊಂಡಿತ್ತು ಎಂದು ಹೇಳಲಾಗಿದೆ. ಹೀಗಾಗಿ ಆನೆಗೆ ಪೈನಾಪಲ್ ತಿನ್ನಿಸಿರುವುದು ಈತನೇ ಎಂದು ಹೇಳಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಆನೆಗೆ ಸ್ಫೋಟಕ ತುಂಬಿದ ಪೈನಾಪಲ್ ತಾನೇ ನೀಡಿರುವುದಾಗಿ ಆ ವ್ಯಕ್ತಿ ವಿಚಾರಣೆಯ ವೇಳೆ ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಈ ಪ್ರಕರಣದಲ್ಲಿ ಹಲವರು ಭಾಗಿಯಾಗಿದ್ದಾರೆ ಎಂದು ಅರಣ್ಯ ಇಲಾಖೆ ಸಚಿವ ಕೆ.ರಾಜು ಅವರು ತಿಳಿಸಿದ್ದಾರೆ. ಈಗಾಗಲೇ ಆರೋಪಿಗಳ ಸುಳಿವನ್ನು ವಿಶೇಷ ತನಿಖಾ ಪಡೆ ಪತ್ತೆ ಹಚ್ಚಿದ್ದು, ಸಂಜೆ ಒಳಗೆ ಇನ್ನಷ್ಟು ಆರೋಪಿಗಳ ಬಂಧನವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…