Featured

ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರಿನ ನೂತನ ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಯೋಜನೆಯಲ್ಲಿ ಬೀಫ್ ಸ್ಟಾಲ್ ಗಳಿಗೆ ಅವಕಾಶ : ವಿಹಿಂಪ ಆಕ್ರೋಶ, ಉಗ್ರ ಹೋರಾಟದ ಎಚ್ಚರಿಕೆ

ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರಿನ ನೂತನ ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಯೋಜನೆಯಲ್ಲಿ ಬೀಫ್ ಸ್ಟಾಲ್ ಗಳಿಗೆ ಅವಕಾಶ : ವಿಹಿಂಪ ಆಕ್ರೋಶ, ಉಗ್ರ ಹೋರಾಟದ ಎಚ್ಚರಿಕೆ

ಮಂಗಳೂರು: ನಗರದಲ್ಲಿಬಿಜೆಪಿ ಆಡಳಿತದ ಮಹಾ ನಗರ ಪಾಲಿಕೆಯಿಂದಲೇ ಬೀಫ್ ಸ್ಟಾಲ್ ನಿರ್ಮಾಣವಾಗುತ್ತಿರುವುದರ ವಿರುದ್ದ ವಿಶ್ವಹಿಂದೂ ಪರಿಷತ್ ಕೆಂಡ ಕಾರಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಮಂಗಳೂರು ಪಾಲಿಕೆಯಲ್ಲೂ ಬಿಜೆಪಿ ಆಡಳಿತವಿದೆ. ಜೊತೆಗೆ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕೂಡ ಇದೆ. ಆದರೂ ಭೀಫ್ ಸ್ಟಾಲ್ ನಿರ್ಮಿಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದ್ದು ಈ ಯೋಜನೆ ಕೈಬಿಡದೇ ಇದ್ದಲ್ಲಿ ಉಗ್ರಹೋರಾಟ ನಡೆಸುವುದಾಗಿ ವಿಹಿಂಪ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಉಡುಪಿ : ಸಿದ್ದರಾಮಯ್ಯ ಅವರು ತಾವೇ ಅಧಿಕಾರಕ್ಕೆ ಬರ್ತೇವೆ ಎಂಬ ಭ್ರಮೆಯಲ್ಲಿದ್ದಾರೆ : ಸಿಎಂ ಬೊಮ್ಮಾಯಿ – Vishwanews24

ಏನಿದು ಯೋಜನೆ?

ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರಿನ ನೂತನ ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಯೋಜನೆಯಲ್ಲಿ ಬೀಫ್ ಸ್ಟಾಲ್ ಗಳಿಗೆ ಅವಕಾಶ ಮಾಡಿಕೊಡಲಾಗಿದೆ. 9 ಬೀಫ್ ಸ್ಟಾಲ್ ನಿರ್ಮಾಣದ ನೀಲ ನಕಾಶೆ ಸಿದ್ದಗೊಂಡಿದ್ದು.114 ಕೋಟಿ ವೆಚ್ಚದಲ್ಲಿ ನೂತನ ಸೆಂಟ್ರಲ್ ‌ಮಾರ್ಕೆಟ್ ನಿರ್ಮಾಣ ಅಗುತ್ತಿದೆ.

ನೂತ‌ನ ಸೆಂಟ್ರಲ್ ಮಾರ್ಕೆಟ್ ನ ಲೋವರ್ ಗ್ರೌಂಡ್ ಫ್ಲೋರ್ ನಲ್ಲಿ 9 ಭೀಫ್ ಸ್ಪಾಲ್ ತೆರೆಯಲಿದೆ. ಸದ್ಯ ಸ್ಮಾರ್ಟ್ ಸಿಟಿ ಮಂಡಳಿ ಮುಂದಿರುವ ಮಾರ್ಕೆಟ್ ನ ತ್ರಿಡಿ ನಕಾಶೆಯಲ್ಲಿ 9 ಬೀಫ್ ಸ್ಟಾಲ್ ಗಳ ಬಗ್ಗೆ ಉಲ್ಲೇಖಿಸಿ ನಕ್ಷೆ ಸಿದ್ಧ ಅಗಿದೆ.

18 ತಿಂಗಳಲ್ಲಿ ‌ನಿರ್ಮಾಣಗೊಳ್ಳಲಿರುವ ನೂತನ ಸೆಂಟ್ರಲ್ ‌ಮಾರ್ಕೆಟ್ ಕಟ್ಟಡ, ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಳ್ಳಲಿರೋ ನೂತನ ಮಾರುಕಟ್ಟೆ ಇದಾಗಿದೆ. ಕಟ್ಟಡ ನಿರ್ಮಾಣಗೊಂಡ ನಂತರ ಮಂಗಳೂರು ಪಾಲಿಕೆಯಿಂದಲೇ ಸ್ಟಾಲ್ ಗಳ ಏಲಂ ನಡೆಯಲಿದ್ದು ಪ್ರಸ್ತಾವಿತ ಯೋಜನೆಯಲ್ಲಿ ಬೀಫ್ ಸ್ಟಾಲ್ ಗೆ ಅವಕಾಶ ಕೊಟ್ಟಿದ್ದಕ್ಕೆ ಪಾಲಿಕೆ ವಿರುದ್ಧ ವಿಶ್ವ ಹಿಂದೂ ಪರಿಷತ್ ಅಕ್ರೋಶ ಹೊರ ಹಾಕಿದೆ.

ಟೈಲರ್ ಕ್ಷೇಮ ನಿಧಿ ಮಂಡಳಿ ರಚಿಸಿ ಭವಿಷ್ಯ ನಿಧಿ, ಮಾಸಿಕ ಪಿಂಚಣಿ ಯೋಜನೆ ಜಾರಿಗೆ ಆಗ್ರಹ : ಸಿಎಂ ಗೆ ಮನವಿ – Vishwanews24

ತರಕಾರಿ, ಕೋಳಿ ಅಂಗಡಿಗಳ ಜೊತೆಗೆ ಬೀಫ್ ಸ್ಟಾಲ್ ಗೆ ಅವಕಾಶ ನೀಡಲಾಗಿದೆ. ಜೊತೆಗೆ ಗೋ ಹತ್ಯೆ ನಿಷೇಧ ಕಾಯ್ದೆ ಬಳಿಕವೂ ಬಿಜೆಪಿಯಿಂದ ಬೀಫ್ ಸ್ಟಾಲ್ ಗೆ ಅವಕಾಶ ನೀಡಿರುವುದು ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 9 ಬೀಫ್ ಸ್ಟಾಲ್ ಗೆ ಅವಕಾಶ ಸರಿಯಲ್ಲ. ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಮಂಡಳಿ ತಕ್ಷಣ ಈ ಯೋಜನೆ ಕೈ ಬಿಡಬೇಕು. ಕೈ ಬಿಡದೇ ಇದ್ದಲ್ಲಿ ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.\

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago