ಬೆಂಗಳೂರು: ಸ್ಯಾಂಡಲ್‍ವುಡ್‍ನ ಹಿರಿಯ ಕಲಾವಿದೆ ಭಾರ್ಗವಿ ನಾರಾಯಣ್ ಅವರು ನಿಧನರಾಗಿದ್ದಾರೆ.
ಭಾರ್ಗವಿ ನಾರಾಯಣ್ (84) ಅವರು ಸೋಮವಾರ ಸಂಜೆ 7:30ಕ್ಕೆ ಕೊನೆಯುಸಿರೆಳೆದಿದ್ದಾರೆ. ಭಾರ್ಗವಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಸಿನಿಮಾ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಭಾರ್ಗವಿ ನಾರಾಯಣ್ ಅವರು ಸಹಜ ಅಭಿನಯದಿಂದ ಗುರುತಿಸಿಕೊಂಡವರು. ಅವರ ಸಾವಿನ ಕುರಿತು ಅವರ ಮೊಮ್ಮಗಳು, ನಟಿ ಸಂಯುಕ್ತಾ ಹೊರನಾಡು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಎರಡು ಕನಸು, ಹಂತಕರ ಸಂಚು, ಪಲ್ಲವಿ ಅನುಪಲ್ಲವಿ, ಬಾ ನಲ್ಲೆ ಮಧುಚಂದ್ರಕೆ, ವಂಶವೃಕ್ಷ, ಪ್ರೋಫೆಸರ್ ಹುಚ್ಚುರಾಯ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. 2019ರಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ಭಾರ್ಗವಿ ಅವರು 600ಕ್ಕೂ ಹೆಚ್ಚು ನಾಟಕಗಳ ಪ್ರದರ್ಶನ ನೀಡಿದ್ದಾರೆ.
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…
ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…