ಬೆಂಗಳೂರು : ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ ದಂಧೆ ಇರುವುದು ನನಗೆ ಗೊತ್ತು. ಇದರ ಜೊತೆಗೆ ರೇವ್ ಪಾರ್ಟಿ ನಡೆಯುತ್ತೆ, ಗಾಂಜಾ ಹೊಡೀತಾರೆ.ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಈಗಿನ ಯಂಗ್ ಹೀರೋಗಳು ಡ್ರಗ್ ಸೇವನೆ ಮಾಡಿ ಶೂಟಿಂಗ್‌ಗೆ ಬರುತ್ತಿದ್ದಾರೆ. ನಟಿಯರೂ ಹೆಚ್ಚಿನ ಸಂಖ್ಯೆಯಲ್ಲಿ ಡ್ರಗ್ ಮಾಫಿಯಾದಲ್ಲಿ ಸಿಲುಕಿಕೊಂಡಿದ್ದಾರೆ. ಬರೀ ಡ್ರಗ್ ದಂಧೆ ಮಾತ್ರವಲ್ಲ, ಇಲ್ಲಿ ರೇವ್ ಪಾರ್ಟಿ ಪಾರ್ಟಿಗಳನ್ನೂ ಮಾಡುತ್ತಾರೆ. ಗಾಂಜಾ ಸೇವನೆಯೂ ಕಾಮನ್ ಆಗ್ತಿದೆ. ಈ ಆಘಾತಕಾರಿ ವಿಚಾರ ಹಿರಿಯ ನಟರಿಗೂ ತಿಳಿದಿದೆ. ಅವರಿಗೆ ಈ ಬೆಳವಣಿಗೆ ಬಗ್ಗೆ ಬೇಸರವಿದೆ. ಇದನ್ನವರು ನನ್ನ ಜೊತೆಗೆ ಚರ್ಚಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ.
ಈ ವರ್ಷ ಯುವ ನಟ ತೀರಿಹೋದಾಗ ಇಡೀ ರಾಜ್ಯಕ್ಕೆ ನೋವಾಗಿತ್ತು. ಆದ್ರೆ, ಮೃತದೇಹದ ಯಾವುದೇ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಿಲ್ಲ. ಮರಣೋತ್ತರ ಪರೀಕ್ಷೆ ನಡೆಸದಂತೆ ರಾಜಕೀಯ ಒತ್ತಡ ಹೇರಲಾಯಿತು. ಈ ಬಗ್ಗೆ ಒಂದೇ ಒಂದು ತನಿಖೆಯೂ ನಡೆಯಲಿಲ್ಲ ಯಾಕೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರಶ್ನಿಸಿದ್ದಾರೆ.
ಹಾಗಂತ, ನನಗೆ ಆ ನಟನ ಕುಟುಂಬಕ್ಕೆ ನೋವು ಮಾಡುವ ಉದ್ದೇಶವಿಲ್ಲ. ಆದರೆ, ಮರಣೋತ್ತರ ಪರೀಕ್ಷೆ ಏಕೆ ನಡೆಸಿಲ್ಲವೆಂಬುದೇ ನನ್ನ ಪ್ರಶ್ನೆ. ಬಾಲಿವುಡ್‌ನಲ್ಲಿ ಸುಶಾಂತ್ ಸಿಂಗ್ ಮರಣೋತ್ತರ ಪರೀಕ್ಷೆಯದ್ದು ದೊಡ್ಡ ಚರ್ಚೆಯಾಗುತ್ತಿದೆ. ಅದೇ ರೀತಿ ಆ ನಟ ಮೃತಪಟ್ಟಗಲೂ ಮರಣೋತ್ತರ ಪರೀಕ್ಷೆ ನಡೆಸಬೇಕಿತ್ತು. ತನಿಖೆ ನಡೆಸಿದ್ದರೆ ಎಲ್ಲ ಮಾಹಿತಿ ಬಹಿರಂಗವಾಗುತ್ತಿತ್ತು ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.
ಚಿತ್ರರಂಗದ 25ರಿಂದ 30 ಕಲಾವಿದರು ಭಾಗಿಯಾಗಿರುವ ಬಗ್ಗೆ ಮಾಹಿತಿಯಿದೆ. ಇದರಲ್ಲಿ 18 ಜನ ಏಜೆಂಟ್ಗಳೇ ಇರುವ ಬಗ್ಗೆ ಮಾಹಿತಿ ಇದೆ. ಯಾವುದೇ ಬ್ಯಾಕ್ಗ್ರೌಂಡ್, ಹಿನ್ನೆಲೆ ಇಲ್ಲದ ನಟಿಯರೂ ಇದ್ದಾರೆ. ಡ್ರಗ್ಸ್ ಜಾಲದಲ್ಲಿ ಸ್ಯಾಂಡಲ್ವುಡ್ ನಟಿಯರಿದ್ದಾರೆ ಎಂದು ಇಂದ್ರಜಿತ್ ಹೇಳಿದ್ದಾರೆ. ನಮ್ಮ ಪೊಲೀಸರ ಬಳಿ ಎಲ್ಲ ಮಾಹಿತಿ, ದಾಖಲೆಗಳು ಇವೆ. ಪೊಲೀಸರು ಮನಸ್ಸು ಮಾಡಿದರೆ ಈ ಕ್ಷಣವೇ ಅವರನ್ನು ಬಂಧಿಸಬಹುದು ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…