ಬೆಂಗಳೂರು, : ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಸದಾಶಿವ್ ಬ್ರಹ್ಮಾವರ್ ಅವರು ವಿಧವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರಿಗೆ 90 ವರ್ಷ ವಯಸ್ಸಾಗಿತ್ತು.
ಆರೋಗ್ಯದಲ್ಲಿ ಏರುಪೇರು ಆಗಿದ್ದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ,ಬುಧವಾರ ಮಧ್ಯಾಹ್ನ ಅವರು ಕೊನೆಯುಸಿರೆಳೆದ್ದಾರೆ. ಕುಟುಂಬದವರಿಗಲ್ಲದೆ ಇನ್ಯಾರಿಗೂ ಸಾವಿನ ವಿಷಯ ತಿಳಿಸಬಾರದು ಎಂದು ತನ್ನ ಮಕ್ಕಳಿಗೆ ತಿಳಿಸಿದ್ದ ಕಾರಣ ಅವರ ಇಚ್ಛೆಯಂತೆ ಯಾರಿಗೂ ತಿಳಿಸದೆ ಬುಧವಾರ ಮದ್ಯಾಹ್ನ ಬನಶಂಕರಿ ಚಿತಾಗಾರದಲ್ಲಿ ಕುಟುಂಬವರ್ಗದವರು ಅಂತ್ಯಕ್ರಿಯೆ ಮಾಡಿದ್ದಾರೆ.
ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ವರ್ಷ ಕುಮಟಾದಲ್ಲಿ ತಿರುಗಾಡುತ್ತಿದ್ದು ಇದು ಮಾಧ್ಯಮಗಳಲ್ಲಿ ಸುದ್ದಿಯಾದ ಬಳಿಕ ನಟರಾದ ಶಿವರಾಜ್ ಕುಮಾರ್, ಸುದೀಪ್ ಮೊದಲಾದವರು ಅವರಿಗೆ ನೆರವಾಗಿದ್ದರು. ಆ ಬಳಿಕ ಕುಟುಂಬದವರೊಂದಿಗೆ ವಾಸವಾಗಿದ್ದರು. ಇವರು ಸುಮಾರು 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಪೋಷಕ ಪಾತ್ರಕ್ಕೆ ಜೀವ ತುಂಬಿದ್ದರು. ಕೆಲ ಕಿರುತೆರೆ ಧಾರಾವಾಹಿಗಳಲ್ಲೂ ಭಾವನಾತ್ಮಕವಾದ ಪಾತ್ರಗಳನ್ನು ಮಾಡಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…