ಸ್ಯಾಂಡಲ್‍ವುಡ್‍ ನ ಖ್ಯಾತ ನಟ ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ..

Featured, ರಾಜ್ಯ ನ್ಯೂಸ್

ಬೆಂಗಳೂರು: ಕನ್ನಡದ ಹಲವು ಕಲಾವಿದರು, ನಿರ್ಮಾಪಕರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ.

ಇಂದು ಬೆಳಗ್ಗೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್, ರಾಕಿಂಗ್ ಸ್ಟಾರ್ ಯಶ್ ಮನೆ ಮೇಲೆ ಐಟಿ ದಾಳಿಯಾಗಿದೆ. ಅಲ್ಲದೇ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಹಾಗೂ ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು, ವಿಲನ್ ಚಿತ್ರದ ನಿರ್ಮಾಪಕ ಸಿ.ಆರ್.ಮನೋಹರ್ ಮನೆಯ ಮೇಲೂ ಐಟಿ ದಾಳಿ ನಡೆದಿದೆ.

ಬೆಂಗಳೂರಿನ ಸದಾಶಿವನಗರದ ಪುನೀತ್ ರಾಜ್ ಕುಮಾರ್ ನಿವಾಸ, ಮಹಾಲಕ್ಷ್ಮಿ ಲೇಔಟ್‍ನ ನಾಗಪುರದ ರಾಕ್ ಲೈನ್ ವೆಂಕಟೇಶ್ ನಿವಾಸ, ಬೆಂಗಳೂರಿನ ನಾಗರಬಾವಿಯ ವಿಜಯ್ ಕಿರಗಂದೂರು ನಿವಾಸದ ಮೇಲೂ ದಾಳಿ ನಡೆದಿದೆ.

ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಮನೆ ಮೇಲೆ ಹಾಗೂ ‘ಗಜಕೇಸರಿ’, ‘ರುಸ್ತುಂ’ ನಿರ್ಮಾಪಕ ಜಯಣ್ಣ ಮನೆ ಮೇಲೂ ಐಟಿ ದಾಳಿ ನಡೆದಿದೆ. ಏಕಕಾಲದಲ್ಲಿ ರೇಡ್ ಮಾಡಿ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಸುಮಾರು 10ಕ್ಕೂ ಹೆಚ್ಚು ಕಡೆ ತೆರಿಗೆ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ..