Featured

ಸ್ಯಾಂಡಲ್‍ವುಡ್ ನಟ ರಾಘವೇಂದ್ರ ರಾಜ್‍ಕುಮಾರ್‌ಗೆ ದಾದಾ ಸಾಹೇಬ್ ಫಾಲ್ಕೆ ವತಿಯಿಂದ ಜೀವಮಾನ ಸಾಧನೆ ಪ್ರಶಸ್ತಿ – Vishwanews24

ಸ್ಯಾಂಡಲ್‍ವುಡ್ ನಟ ರಾಘವೇಂದ್ರ ರಾಜ್‍ಕುಮಾರ್‌ಗೆ ದಾದಾ ಸಾಹೇಬ್ ಫಾಲ್ಕೆ ವತಿಯಿಂದ ಜೀವಮಾನ ಸಾಧನೆ ಪ್ರಶಸ್ತಿ – Vishwanews24

ಬೆಂಗಳೂರು: ಸ್ಯಾಂಡಲ್‍ವುಡ್ ನಟ ರಾಘವೆಂದ್ರ ರಾಜ್‍ಕುಮಾರ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ವತಿಯಿಂದ ಜೀವಮಾನ ಸಾಧನೆ ಪ್ರಶಸ್ತಿ ದೊರೆತಿದೆ.

ಈ ಕುರಿತಂತೆ ರಾಘವೇಂದ್ರ ರಾಜ್‍ಕುಮಾರ್ ಅವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಪ್ರಶಸ್ತಿ ಸ್ವೀಕರಿಸಿದ ವೀಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ವೀಡಿಯೋದಲ್ಲಿ ಚಂದನವನದಲ್ಲಿ ರಾಘವೇಂದ್ರ ರಾಜ್‍ಕುಮಾರ್ ಅವರ ಜರ್ನಿಯನ್ನು ವಿವರಿಸಲಾಗಿದೆ.

ವೀಡಿಯೋ ಜೊತೆಗೆ, ನಿನ್ನೆ ಬೆಂಗಳೂರಿನಲ್ಲಿ ನಡೆದ ಇನೊವೆಟೀವ್ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ‘ದಾದಾ ಸಾಹೇಬ್ ಫಾಲ್ಕೆ ಎಂಎಸ್‍ಕೆ ಟ್ರಸ್ಟ್’ ವತಿಯಿಂದ ‘ಜೀವಮಾನ ಸಾಧನೆ ಪ್ರಶಸ್ತಿಯನ್ನು ನನಗೆ ನೀಡಿ ಗೌರವಿಸಿದ್ದಾರೆ. ಈ ಪ್ರಶಸ್ತಿಯು ಅಪ್ಪಾಜಿ, ಅಮ್ಮ, ಕುಟುಂಬ ವರ್ಗ ಹಾಗೂ ನನ್ನೆಲ್ಲಾ ಅಭಿಮಾನಿ ದೇವರುಗಳಿಗೆ ಅರ್ಪಿಸುತ್ತಿದ್ದೇನೆ. ತುಂಬು ಹೃದಯದ ಧನ್ಯಾವಾದಗಳು ಎಂದು ಕಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

ವರನಟ ಡಾ. ರಾಜ್‍ಕುಮಾರ್‌ರವರ ಪ್ರೀತಿಯ ಸುಪುತ್ರರಲ್ಲಿ ರಾಘವೇಂದ್ರ ರಾಜ್‍ಕುಮಾರ್ ಅವರು ದ್ವಿತೀಯ ಪುತ್ರರಾಗಿದ್ದಾರೆ. ರಾಘವೆಂದ್ರ ರಾಜ್‍ಕುಮಾರ್ ಅವರು ಭಾರತೀಯ ಚಿತ್ರರಂಗದ ನಟರಾಗಿದ್ದು, ಕನ್ನಡ ಚಿತ್ರರಂಗದಲ್ಲಿ ಗಾಯಕ ಹಾಗೂ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. 1974ರಲ್ಲಿ ಡಾ. ರಾಜ್‍ಕುಮಾರ್ ಅಭಿನಯಿಸಿದ್ದ ಶ್ರೀನಿವಾಸ ಕಲ್ಯಾಣ ಸಿನಿಮಾದಲ್ಲಿ ಬಾಲನಟರಾಗಿ ನಟಿಸಿದ್ದರು. ನಂತರ ಚಿರಂಜೀವಿ ಸುಧಾಕರ ಸಿನಿಮಾದ ಮೂಲಕ ನಾಯಕ ನಟನಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದರು. ನಂತರ 1989ರಲ್ಲಿ ಬಿಡುಗಡೆಗೊಂಡ ನಂಜುಂಡಿ ಕಲ್ಯಾಣ ಸಿನಿಮಾ ರಾಘವೇಂದ್ರ ರಾಜ್‍ಕುಮಾರ್ ಅವರಿಗೆ ಬಹುದೊಡ್ಡ ಹಿಟ್ ಜೊತೆಗೆ ನೇಮ್ ಹಾಗೂ ಫ್ರೇಮ್ ತಂದುಕೊಟ್ಟಿತ್ತು.

ಇಲ್ಲಿಯವರೆಗೂ ರಾಘವೇಂದ್ರ ರಾಜ್‍ಕುಮಾರ್ ಅವರು 23 ಸಿನಿಮಾಗಳಲ್ಲಿ ಅಭಿನಯಿಸಿದ್ದು, ಸಾಕಷ್ಟು ಗೀತೆಗಳನ್ನು ಹಾಡಿದ್ದಾರೆ ಮತ್ತು 5 ಸಿನಿಮಾಗಳನ್ನು ನಿರ್ಮಿಸಿದ್ದಾರೆ. 2019ರಲ್ಲಿ ತೆರೆ ಕಂಡ ಅಮ್ಮನ ಮನೆ ಸಿನಿಮಾಕ್ಕಾಗಿ ರಾಘವೇಂದ್ರ ರಾಜ್‍ಕುಮಾರ್ ಅವರು ಉತ್ತಮ ನಟರಾಗಿ ಕರ್ನಾಟಕ ರಾಜ್ಯ ಪ್ರಶಸ್ತಿಯನ್ನು ಮೂಡಿಗೇರಿಸಿಕೊಂಡಿದ್ದಾರೆ.

ಇದೀಗ ರಾಘವೇಂದ್ರ ರಾಜ್‍ಕುಮಾರ್ ಅವರ ಸಾಧನೆ ಮೆಚ್ಚಿ ‘ದಾದಾ ಸಾಹೇಬ್ ಫಾಲ್ಕೆ ಎಂಎಸ್‍ಕೆ ಟ್ರಸ್ಟ್’ ವತಿ ಜೀವಮಾನ ಸಾಧನೆ ಪ್ರಶಸ್ತಿ ನೀಡುವ ಮೂಲಕ ಗೌರವಿಸಿದೆ.

 

Vishwa News 24

Recent Posts

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

23 minutes ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

44 minutes ago

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  – vishwanews24

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  ಉಡುಪಿ :…

1 hour ago

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ – vishwanews24

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ ತಿರುವನಂತಪುರಂ: ಕೊಚ್ಚಿನ್…

1 hour ago

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ – vishwanews24

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…

1 hour ago

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ – vishwanews24

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…

1 hour ago