ಬೆಂಗಳೂರು: ಸ್ಯಾಂಡಲ್‍ವುಡ್ ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಕೆಲ ದಿನಗಳ ಹಿಂದೆ ಸತ್ಯಜಿತ್ ಅವರಿಗೆ ಜಾಂಡೀಸ್ ಆಗಿತ್ತು. ಈ ಬೆನ್ನಲ್ಲೇ ಕಳೆದ ಶುಕ್ರವಾರ ಹೃದಯಾಘಾತ ಕೂಡ ಸಂಭವಿಸಿತ್ತು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು.
ಎರಡು ದಿನಗಳ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಸದ್ಯ ನಟನ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಕಾರಣ ಬೌರಿಂಗ್ ಭಾನುವಾರ ಆಸ್ಪತ್ರೆಗೆ ಮತ್ತೆ ದಾಖಲಿಸಲಾಗಿದೆ.
ಆರ್ಯನ್ ಖಾನ್ ಬಂಧನ ಹಿನ್ನಲೆ : ಶಾರುಖ್ ಮನೆಗೆ ಸಲ್ಮಾನ್ ಖಾನ್ ಭೇಟಿ -Vishwanews24
ಈಗಾಗಲೇ ಗ್ಯಾಂಗ್ರಿನ್ ನಿಂದ ಎಡಗಾಲು ತೆಗೆಯಲಾಗಿದೆ. ಗ್ಯಾಂಗ್ರಿನ್ ಬಲಗಾಲಿಗೂ ಸ್ಪ್ರೆಡ್ ಆಗುತ್ತಿದ್ದು ತಕ್ಷಣ ಐಸಿಯುನಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗಿದೆ. ಬಿಪಿ ಮತ್ತು ಶುಗರ್ ಏರುಪೇರಾಗುತ್ತಿದ್ದು, ವಯಸ್ಸು 70 ದಾಟಿರುವ ಕಾರಣ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಆದರೆ ವೈದ್ಯರು ಪ್ರಯತ್ನವನ್ನು ಮುಂದುವರಿಸಿದ್ದಾರೆ ಎಂದು ಪುತ್ರ ಆಕಾಶ್ ಜಿತ್ ಮಾಹಿತಿ ನಿಡಿದ್ದಾರೆ.
ಇದೇ ವೇಳೆ ಕಳೆದ ಕೆಲ ವರ್ಷಗಳಿಂದ ಗ್ಯಾಂಗ್ರಿನ್ ನಿಂದ ಬಳಲುತ್ತಿರುವ ಕಾರಣ ಹಣದ ಸಮಸ್ಯೆ ಇರುವುದು ನಿಜ. ಆದರೆ ಜನರಿಂದ ಹಣ ಪಡೆಯುವುದು ಇಷ್ಟವಿಲ್ಲ. ಫಿಲ್ಮ್ ಚೇಂಬರ್, ಸರ್ಕಾರ ಅಥವಾ ಇನ್ಶೂರೆನ್ಸ್ ಕಡೆಯಿಂದ ಹಣ ಕೊಟ್ಟರೆ ಚಿಕಿತ್ಸೆಗೆ ಸಹಾಯವಾಗುತ್ತದೆ ಎಂದು ಆಕಾಶ್ ಅಳಲು ತೋಡಿಕೊಂಡಿದ್ದಾರೆ.
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…
ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ : ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…
ಮಂಗಳೂರು : ಅಕ್ರಮವಾಗಿ ಜಾನುವಾರುಗಳ ಹಿಂಸಾತ್ಮಕ ಸಾಗಾಟ: 17 ಜಾನುವಾರುಗಳ ರಕ್ಷಣೆ ; ಓರ್ವ ಬಂಧನ ಮಂಗಳೂರು: ಅಕ್ರಮವಾಗಿ ಜಾನುವಾರುಗಳನ್ನು…
ನಕಲಿ ಔಷಧಿಗಳ ಜಾಲ ನಿಯಂತ್ರಣಕ್ಕೆ ಕೇಂದ್ರ ಔಷಧ ನಿಯಂತ್ರಣ ಇಲಾಖೆ ಯಿಂದ ಮಹತ್ವದ ಮಾರ್ಗಸೂಚಿ ಪ್ರಕಟ ಬೆಂಗಳೂರು : ನಕಲಿ…
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 3 ಲಕ್ಷ ದಂಡ ಪುತ್ತೂರು : ಹಿಂದೂ…