ಸ್ಯಾಂಡಲ್ ವುಡ್ ನಿರ್ದೇಶಕ ಪ್ರದೀಪ್ ರಾಜ್ ಕೊರೋನಾಗೆ ಬಲಿ – Vishwanews24

Featured, ರಾಜ್ಯ ನ್ಯೂಸ್

ಸ್ಯಾಂಡಲ್ ವುಡ್ ನಿರ್ದೇಶಕ ಪ್ರದೀಪ್ ರಾಜ್ ಕೊರೋನಾಗೆ ಬಲಿ – Vishwanews24

ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ದೇಶಕ ಪ್ರದೀಪ್ ರಾಜ್ ಇಂದು ಗುರುವಾರ ಕೊರೋನಾ ಸೋಂಕಿನಿಂದ ನಿಧನರಾಗಿದ್ದಾರ. ಅವರಿಗೆ 46 ವರ್ಷ ವಯಸ್ಸಾಗಿತ್ತು.ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಪ್ರದೀಪ್ ರಾಜ್ ಹಲವು ವರ್ಷಗಳಿಂಡ ಡಯಾಬಿಟಿಸ್ ನಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದೆ ಪ್ರದೀಪ್ ರಾಜ್ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾವ ಮೂರು ಗಂಟೆಗೆ ಪಾಂಡಿಚೇರಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು ಮಧ್ಯಾಹ್ನ ಹೊತ್ತಿಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಅವರ ಸೋದರ ಪ್ರಶಾಂತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಯಶ್ ನಟನೆಯ ಕಿರಾತಕ ಚಿತ್ರ ಹಿಟ್ ಆಗಿತ್ತು. ನಂತರ ಪ್ರದೀಪ್ ರಾಜ್ ಅಂಜದ ಗಂಡು, ಬೆಂಗಳೂರು-23, ಮಿಸ್ಟರ್ 420, ದುನಿಯಾ ವಿಜಯ್ ನಟನೆಯ ರಜನಿಕಾಂತ್ ಮೊದಲಾದ ಸಿನೆಮಾಗಳನ್ನು ನಿರ್ದೇಶಿಸಿದ್ದರು. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಮೂಡುಬಿದಿರೆ : ರಸ್ತೆ ಅಪಘಾತ ; ಖ್ಯಾತ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ನಿಧನ – Vishwanews24

 

Leave a Reply