Featured

ಸ್ಯಾಂಡಲ್ ವುಡ್ ನ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ – vishwanews24

ಸ್ಯಾಂಡಲ್ ವುಡ್ ನ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ

ಸ್ಯಾಂಡಲ್ ವುಡ್ ನ ಖ್ಯಾತ ಸಾಹಸ ನಿರ್ದೇಶಕ, ಮಲಯಾಳಂ ಮೂಲದ ಜಾಲಿ ಬಾಸ್ಟಿನ್ ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಸಾವಿರಾರು ಚಿತ್ರಗಳಿಗೆ ಸಾಹಸ ದೃಶ್ಯಗಳನ್ನು ಕಂಪೋಸ್ ಮಾಡಿರುವ ಜಾಲಿ ಬಾಸ್ಟಿನ್, ಬಹುಬೇಡಿಕೆ ಸ್ಟಂಟ್ ಮಾಸ್ಟರ್ ಆಗಿದ್ದರು.

ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಜಾಲಿ ಬಾಸ್ಟಿನ್, ಕ್ರೇಜಿಸ್ಟಾರ್ ರವಿಚಂದ್ರನ್ ಕಣ್ಣಿಗೆ ಬಿದ್ದು, ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದರು. ಪ್ರೇಮಲೋಕ ಸೇರಿದಂತೆ ರವಿಚಂದ್ರನ್ ಅವರ ಬಹುತೇಕ ಚಿತ್ರಗಳಿಗೆ ಇವರ ಸಾಹಸ ನಿರ್ದೇಶನವಿದೆ. ಶಾಂತಿ ಕ್ರಾಂತಿಗಾಗಿ ಮಾಡಿದ ಸಾಹಸ ದೃಶ್ಯಗಳ ಕಂಪೋಸ್ ಇವತ್ತಿಗೂ ನೆನಪಿನಲ್ಲಿ ಉಳಿಯುವಂಥದ್ದು.

ಕೇರಳದಲ್ಲಿ 1966ರಲ್ಲಿ ಜಾಲಿ ಬಾಸ್ಟಿನ್ ಹುಟ್ಟಿದ್ದರೂ, ಬೆಳೆದದ್ದು ಬೆಂಗಳೂರಿನಲ್ಲಿ. ಇಲ್ಲಿಯೇ ನೆಲೆಯೂರಿ ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಸಿನಿಮಾಗಳಿಗೆ ಕೆಲಸ ಮಾಡಿದ್ದಾರೆ. ಇತ್ತೀಚೆಗಷ್ಟೇ ಅವರು ದುನಿಯಾ ವಿಜಯ್ ನಿರ್ದೇಶನದ ಭೀಮ ಸಿನಿಮಾಗಾಗಿ ಕೆಲಸ ಮಾಡಿದ್ದರು.

ಡಿಸೆಂಬರ್ ಬಂತೆಂದರೆ ಒಂದು ರೀತಿಯಲ್ಲಿ ಚಿತ್ರೋದ್ಯಮಕ್ಕೆ ಭಯ ಕಾಡುತ್ತದೆ. ಹಲವು ವರ್ಷಗಳಿಂದ ಡಿಸೆಂಬರ್ ನಲ್ಲಿ ಚಿತ್ರೋದ್ಯಮ ಅನೇಕ ಗಣ್ಯರನ್ನು ಕಳೆದುಕೊಂಡಿದೆ. ಇತ್ತೀಚೆಗಷ್ಟೇ ಲೀಲಾವತಿ ಅವರನ್ನು ಕಳೆದುಕೊಂಡು ಚಿತ್ರೋದ್ಯಮ ದುಃಖದಲ್ಲಿತ್ತು. ಈಗ ಜಾಲಿ ಕೂಡ ಚಿತ್ರೋದ್ಯಮದಿಂದ ಮರೆಯಾಗಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

15 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

15 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

16 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

16 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

16 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

16 hours ago