ಸ್ಲೀಪರ್ ಕೋಚ್ ಬಸ್‌ನಲ್ಲಿ ದರೋಡೆ : 90 ಲಕ್ಷ ಮೌಲ್ಯದ ಚಿನ್ನಾಭರಣದೊಂದಿಗೆ ಪರಾರಿ – vishwanews24

Featured, ರಾಜ್ಯ ನ್ಯೂಸ್

ಮಂತ್ರಾಲಯದಿಂದ  ಮಂಗಳೂರಿಗೆ ಬರುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ ದರೋಡೆ : 90 ಲಕ್ಷ ಮೌಲ್ಯದ ಚಿನ್ನಾಭರಣದೊಂದಿಗೆ ಪರಾರಿ

ಕೊಪ್ಪಳ : ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ನಾಲ್ವರು ಖದೀಮರು ಬರೋಬ್ಬರಿ 90 ಲಕ್ಷ ರೂಪಾಯಿ ಮೌಲ್ಯದ ಬಂಗಾರವನ್ನು ದರೋಡೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಹೊರವಲಯದಲ್ಲಿ ಸಂಭವಿಸಿದೆ. ಹೋಟೆಲ್ ಒಂದರ ಮುಂಭಾಗದಲ್ಲಿ ಈ ಕೃತ್ಯ ನಡೆದಿದ್ದು, ದರೋಡೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ.

‘ಶ್ರೀ ಕುಮಾರ್’ ಹೆಸರಿನ ಖಾಸಗಿ ಬಸ್ ಕೊಪ್ಪಳದ ಹೊರವಲಯದಲ್ಲಿ ರಾತ್ರಿ ಊಟಕ್ಕಾಗಿ ಹೋಟೆಲ್ ಒಂದರ ಬಳಿ ನಿಂತಿತ್ತು. ಬಸ್‌ನಲ್ಲಿದ್ದ ಪ್ರಯಾಣಿಕರಾದ ಮಹಮ್ಮದ್ ಮತ್ತು ಇರ್ಷಾದ್ ಎಂಬುವವರು ಊಟಕ್ಕೆ ಕೆಳಗಿಳಿದಿದ್ದರು. ಈ ಸಮಯಕ್ಕಾಗಿ ಕಾಯುತ್ತಿದ್ದ ಖದೀಮರು, ಕ್ಷಣಾರ್ಧದಲ್ಲಿ ಬಸ್ ಹತ್ತಿ ಅವರ ಬ್ಯಾಗಿನಲ್ಲಿದ್ದ 90 ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದ್ದ ಚೀಲವನ್ನು ಎಗರಿಸಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ:👇

ವಾಣಿಜ್ಯ ಸಿಲಿಂಡರ್ ಸಮಸ್ಯೆ 1 ವಾರದಲ್ಲಿ ಬಗೆಹರಿಯಲಿದೆ  : ಕೆ.ಎಚ್.ಮುನಿಯಪ್ಪ – vishwanews24

ಪ್ರಾಥಮಿಕ ತನಿಖೆಯ ಪ್ರಕಾರ, ಈ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಸಿಂಧನೂರಿನಿಂದ ಸ್ಲೀಪರ್ ಕೋಚ್ ಬಸ್‌ನಲ್ಲಿ ಪ್ರಯಾಣಿಸಿ ಕೊಪ್ಪಳಕ್ಕೆ ಬಂದಿದ್ದಾನೆ. ಅದೇ ವೇಳೆ ಇನ್ನೂ ಮೂವರು ಖದೀಮರು ಬೇರೆ ವಾಹನದಲ್ಲಿ ಬಸ್‌ನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಒಟ್ಟು ನಾಲ್ವರು ಮೊದಲೇ ಸಂಚು ರೂಪಿಸಿ ಈ  ಕೃತ್ಯವನ್ನು  ಮಾಡಿದ್ದಾರೆ.

ದರೋಡೆಕೋರರು ಬಸ್ ಹತ್ತುವುದು ಮತ್ತು ಬಂಗಾರದ ಚೀಲದೊಂದಿಗೆ ಪರಾರಿಯಾಗುವ ದೃಶ್ಯಗಳು ಹೋಟೆಲ್‌ನ ಸಿಸಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ದಾಖಲಾಗಿವೆ. ಈ ದೃಶ್ಯಾವಳಿಗಳನ್ನು ಆಧರಿಸಿ ಕೊಪ್ಪಳ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ ಬಲೆ ಬೀಸಿದ್ದಾರೆ.

ಇದನ್ನೂ ಓದಿ:👇

ರಾಜ್ಯದಲ್ಲಿ ಪ್ರತಿ ಜಿಲ್ಲೆಗೂ ಒಂದು ಸರಕಾರಿ ವೈದ್ಯಕೀಯ ಕಾಲೇಜು : ಸಚಿವರ ಭರವಸೆ – vishwanews24

Leave a Reply