ಕೊಪ್ಪಳ : ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಸ್ಲೀಪರ್ ಬಸ್ನಲ್ಲಿ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ನಾಲ್ವರು ಖದೀಮರು ಬರೋಬ್ಬರಿ 90 ಲಕ್ಷ ರೂಪಾಯಿ ಮೌಲ್ಯದ ಬಂಗಾರವನ್ನು ದರೋಡೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಹೊರವಲಯದಲ್ಲಿ ಸಂಭವಿಸಿದೆ. ಹೋಟೆಲ್ ಒಂದರ ಮುಂಭಾಗದಲ್ಲಿ ಈ ಕೃತ್ಯ ನಡೆದಿದ್ದು, ದರೋಡೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ.
‘ಶ್ರೀ ಕುಮಾರ್’ ಹೆಸರಿನ ಖಾಸಗಿ ಬಸ್ ಕೊಪ್ಪಳದ ಹೊರವಲಯದಲ್ಲಿ ರಾತ್ರಿ ಊಟಕ್ಕಾಗಿ ಹೋಟೆಲ್ ಒಂದರ ಬಳಿ ನಿಂತಿತ್ತು. ಬಸ್ನಲ್ಲಿದ್ದ ಪ್ರಯಾಣಿಕರಾದ ಮಹಮ್ಮದ್ ಮತ್ತು ಇರ್ಷಾದ್ ಎಂಬುವವರು ಊಟಕ್ಕೆ ಕೆಳಗಿಳಿದಿದ್ದರು. ಈ ಸಮಯಕ್ಕಾಗಿ ಕಾಯುತ್ತಿದ್ದ ಖದೀಮರು, ಕ್ಷಣಾರ್ಧದಲ್ಲಿ ಬಸ್ ಹತ್ತಿ ಅವರ ಬ್ಯಾಗಿನಲ್ಲಿದ್ದ 90 ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದ್ದ ಚೀಲವನ್ನು ಎಗರಿಸಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ:👇
ಪ್ರಾಥಮಿಕ ತನಿಖೆಯ ಪ್ರಕಾರ, ಈ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಸಿಂಧನೂರಿನಿಂದ ಸ್ಲೀಪರ್ ಕೋಚ್ ಬಸ್ನಲ್ಲಿ ಪ್ರಯಾಣಿಸಿ ಕೊಪ್ಪಳಕ್ಕೆ ಬಂದಿದ್ದಾನೆ. ಅದೇ ವೇಳೆ ಇನ್ನೂ ಮೂವರು ಖದೀಮರು ಬೇರೆ ವಾಹನದಲ್ಲಿ ಬಸ್ನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಒಟ್ಟು ನಾಲ್ವರು ಮೊದಲೇ ಸಂಚು ರೂಪಿಸಿ ಈ ಕೃತ್ಯವನ್ನು ಮಾಡಿದ್ದಾರೆ.
ದರೋಡೆಕೋರರು ಬಸ್ ಹತ್ತುವುದು ಮತ್ತು ಬಂಗಾರದ ಚೀಲದೊಂದಿಗೆ ಪರಾರಿಯಾಗುವ ದೃಶ್ಯಗಳು ಹೋಟೆಲ್ನ ಸಿಸಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ದಾಖಲಾಗಿವೆ. ಈ ದೃಶ್ಯಾವಳಿಗಳನ್ನು ಆಧರಿಸಿ ಕೊಪ್ಪಳ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ ಬಲೆ ಬೀಸಿದ್ದಾರೆ.
ಇದನ್ನೂ ಓದಿ:👇
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…