ಸ್ಲೀಪರ್ ಬಸ್ ಗಳ ಸುರಕ್ಷತೆಗೆ ಮಾರ್ಗಸೂಚಿ ರೂಪಿಸುವ ಅಗತ್ಯವಿದೆ: ಎಚ್ ಡಿ ಕುಮಾರಸ್ವಾಮಿ – vishwanews24
ಸ್ಲೀಪರ್ ಬಸ್ ಗಳ ಸುರಕ್ಷತೆಗೆ ಮಾರ್ಗಸೂಚಿ ರೂಪಿಸುವ ಅಗತ್ಯವಿದೆ: ಎಚ್ ಡಿ ಕುಮಾರಸ್ವಾಮಿ
ದಾವಣಗೆರೆ: ಚಿತ್ರದುರ್ಗದ ಹಿರಿಯೂರು ತಾಲೂಕಿನಲ್ಲಿ ಸಂಭವಿಸಿದ ಬಸ್ ದುರಂತ ಅತ್ಯಂತ ದುಃಖದ ಸಂಗತಿ. ಸಾವಿನಲ್ಲಿರುವ ಕುಟುಂಬಗಳ ನೋವು ಅರ್ಥವಾಗಿದೆ. ನೋವಿನಿಂದ ಹೊರಬರುವ ಶಕ್ತಿಯನ್ನು ಸಂತ್ರಸ್ತ ಕುಟುಂಬಗಳಿಗೆ ದೇವರು ಕರುಣಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ ಸಂದರ್ಭದ ಪ್ರಯಾಣ ಅಸುರಕ್ಷಿತ ಎಂಬ ಭಾವನೆ ಮೂಡಿದೆ. ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ನಿರೀಕ್ಷೆ ಮೀರಿದ ಸಾವು-ನೋವು ಉಂಟಾಗುತ್ತಿದೆ. ಕ್ಲೀಪರ್ ಕೋಚ್ ಖಾಸಗಿ ಬಸ್ಗಳಲ್ಲಿ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸುವ ಅಗತ್ಯವಿದೆ ಎಂದರು.
ಚಿತ್ರದುರ್ಗ ಬಸ್ ದುರಂತ: ಲಾರಿ ಚಾಲಕನ ವೇಗ ಮತ್ತು ಅಜಾಗರೂಕತೆಯಿಂದ ಅಪಘಾತ : ರಾಮಲಿಂಗರೆಡ್ಡಿ – vishwanews24
ಸ್ಲೀಪರ್ ಕೋಚ್ ಬಸ್ ಗಳಲ್ಲಿ ಅವಘಡ ಸಂಭವಿಸಿದಾಗ ತುರ್ತಾಗಿ ಪಾರಾಗುವ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಿದೆ. ಬಸ್ ಮಾಲೀಕರೊಂದಿಗೆ ಚರ್ಚಿಸಿ ಮಾರ್ಗಸೂಚಿ ರೂಪಿಸಬೇಕು ಎಂದು ಆಗ್ರಹಿಸಿದರು.
