ಬೆಂಗಳೂರು: ಕಾರ್ಕಳದಲ್ಲಿ ಸ್ಪರ್ಧಿಸಲು ಬಿಜೆಪಿ ಸಚಿವರು, ಶಾಸಕರು ತನುಮನ ಧನದ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂಬ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿಕೆಗೆ ತಿರುಗೇಟು ನೀಡಿರುವ ಕಾರ್ಕಳ ಶಾಸಕ, ಸಚಿವ ಸುನಿಲ್ ಕುಮಾರ್, ‘ನಮ್ಮ ಅನುಮಾನವೀಗ ನಿಜವಾಗಿದೆ’ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಿಯ ಮುತಾಲಿಕ್ ಜೀ, ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ ಎಂದು ನಮಗೆ ಮೊದಲೇ ಅನುಮಾನವಿತ್ತು. ಅದೀಗ ನಿಜವಾಗಿದೆ. ಸ್ವಂತ ಬುದ್ಧಿಯಿಂದ ನೀವು ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ ಎಂದಿದ್ದಾರೆ.
ನೀವು ಕಾರ್ಕಳದಿಂದ ಸ್ಪರ್ಧೆಗೆ ಇಳಿಯುವುದನ್ನು ನಾನು ಮೊದಲೇ ಸ್ವಾಗತಿಸಿದ್ದೇನೆ. ಈಗ ನಿಮಗೆ ತನು ಮನ ಧನ ಸಹಾಯ ಮಾಡುವವರೂ ಕಾರ್ಕಳಕ್ಕೆ ಬಂದು ಪ್ರಚಾರ ಮಾಡಲಿ ಎಂದು ನಾನು ಆಶಿಸುತ್ತೇನೆ. ನಿಮ್ಮ ಸ್ಪರ್ಧೆಯ ಉದ್ದೇಶ ಏನೆಂಬುದನ್ನು ಕೆಲ ದಿನಗಳ ಹಿಂದೆ ‘ವೋಟು, ನೋಟು’ ಹೇಳಿಕೆಯ ಮೂಲಕ ತಿಳಿಸಿದ್ದಿರಿ. ಈಗ ತನು ಮನ ಧನ ಸಹಾಯವಿದೆ ಎಂದು ಹೇಳುತ್ತಿದ್ದೀರಿ. ಒಟ್ಟಾರೆಯಾಗಿ ನಿಮ್ಮಈ ಸ್ಪರ್ಧೆಯ ಉದ್ದೇಶ ಕಾರ್ಕಳದ ಹಿತವಲ್ಲ, ಹಿಂದುತ್ವದ ಹಿತವಲ್ಲ, ಜನತೆಯ ಹಿತವೂ ಅಲ್ಲ. ಅದು ” ತನು- ಮನ-ಧನ” – ನೋಟಿಗಾಗಿ ಎಂಬುದು ನಿಮ್ಮ ಹೇಳಿಕೆಯಲ್ಲೇ ಸ್ಪಷ್ಟವಾಗಿದೆ ಎಂದು ಸುನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…