Featured

ಸ್ವಚ್ಛತೆ ಕೊರತೆ : ಪಣಂಬೂರು ಬೀಚ್ ನಲ್ಲಿದ್ದ ಆಹಾರ ಮಳಿಗೆಗಳನ್ನ ತಕ್ಷಣ ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶ  – Vishwanews24

ಮಂಗಳೂರು: ಪಣಂಬೂರು ಬೀಚ್ ಆಹಾರ ಮಳಿಗೆ ಮೇಲೆ ದ.ಕ. ಜಿಲ್ಲಾಧಿಕಾರಿ ದಿಢೀರ್ ದಾಳಿ

ಮಂಗಳೂರು,: ಪಣಂಬೂರು ಬೀಚ್‌ ನಲ್ಲಿರುವ ಆಹಾರ ಮಳಿಗೆಗಳ ಮೇಲೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ದಿಢೀರ್ ದಾಳಿ ನಡೆಸಿ ಹತ್ತಕ್ಕೂ ಅಧಿಕ ಅಂಗಡಿಗಳಲ್ಲಿ ಸ್ವಚ್ಛತೆಯ ಕೊರತೆ ಕಂಡು ಬಂದಿರುವುದರಿಂದ ತಕ್ಷಣ ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ.

ಪತ್ರಕರ್ತರ ಸಂಘ, ದ.ಕ. ಜಿಲ್ಲಾಡಳಿತ ಸಹಿತ ಬ್ರಾಂಡ್ ಮಂಗಳೂರಿನ ಪರಿಕಲ್ಪನೆಯಲ್ಲಿ ಸಮುದ್ರ ಕಿನಾರೆಯ ಸ್ವಚ್ಛತೆಗೆ ಯೋಜನೆಯನ್ನು ಹಮ್ಮಿಕೊಂಡು ಅದರಂತೆ ಜಿಲ್ಲಾಧಿಕಾರಿ ಉದ್ಘಾಟನೆಗೆ ಆಗಮಿಸಿದ್ದರು. ಬಳಿಕ ಆಹಾರ ಸ್ಟಾಲ್‌ ಗಳು ಹಾಗೂ ಅಂಗಡಿಗಳಿಗೆ ಭೇಟಿ ನೀಡಿ ಪರಿಸರ ಸ್ವಚ್ಛತೆಯ ಕುರಿತು ಕ್ಲಾಸ್ ತೆಗೆದುಕೊಂಡರು.

ಈ ನಡುವೆ ಶೌಚಾಲಯದ ಮುಂಭಾಗ ಅಕ್ರಮವಾಗಿ ಕಟ್ಟಲ್ಪಟ್ಟ ಗೋಬಿ ಮಂಚೂರಿ ಅಂಗಡಿಗೆ ತೆರಳಿದ ಅವರು ಅಲ್ಲಿಯ ಶುಚಿತ್ವದ ಕೊರತೆ ಕಂಡು ತೀವ್ರ ಆಕ್ರೋಷಿತರಾಗಿ ತಕ್ಷಣ ಅಂಗಡಿ ಮುಚ್ಚುವಂತೆ ಆದೇಶ ನೀಡಿದ್ದಾರೆ. ಕೊಳೆತ ತರಕಾರಿಗಳು, ಹಲವು ದಿನಗಳಿಂದ ಉಪಯೋಗಿಸುತ್ತಿರುವ ಅಡುಗೆ ಎಣ್ಣೆ ಹಾಗೂ ಶೌಚಾಲಯವನ್ನೇ ದಿನಸಿ ಸಾಮಾನುಗಳನ್ನು ಸಂಗ್ರಹಿಸಿ ಇಡಲು ಕೋಣೆಯನ್ನಾಗಿ ಪರಿವರ್ತಿಸಿದನ್ನು ಕಂಡು ದಿಗ್ಗಮೆಗೊಂಡರು.

ಬಳಿಕ ಸಮೀಪದ ಎಲ್ಲಾ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಶುಚಿತ್ವದ ಕೊರತೆ ಕಂಡು ಬಂದ ಮಳಿಗೆಗಳ ಮೇಲೆ ಬೀಗ ಮುದ್ರಿಸುವಂತೆ ಸೂಚನೆ ನೀಡಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಫಾಸ್ಟ್ ಫುಡ್ ಅಂಗಡಿಯೊಂದರಲ್ಲಂತೂ ಕ್ಯಾಬೇಜ್ ಬಳಸಿ ಗೋಬಿಮಂಚೂರಿ ಮಾಡುತ್ತಿರುವುದು ಕೂಡಾ ಪತ್ತೆಯಾಗಿದೆ. ಎಲ್ಲಾ ಅಂಗಡಿ ಮಾಲಕರಿಗೂ ಕೂಡಾ ಸ್ವಚ್ಛತೆಯ ವಿಚಾರದಲ್ಲಿ ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಒಟ್ಟಿನಲ್ಲಿ, ವ್ಯಾಪಾರದ ದೃಷ್ಟಿಯಿಂದ ಮಾತ್ರ ಗಮನ ನೀಡುತ್ತಿದ್ದ ಅಂಗಡಿ, ಹೋಟೆಲ್ ಮಾಲಕರಿಗೆ ಜಿಲ್ಲಾಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 minute ago

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ – vishwanews24

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…

12 minutes ago

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ – vishwanews24

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ  ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…

2 hours ago

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

2 hours ago

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

2 hours ago

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…

3 hours ago