Featured

ಸ್ವಚ್ಛ ನಗರಗಳ ಫಲಿತಾಂಶ ಪ್ರಕಟ ; ಅರಮನೆ ನಗರಿ ಮೈಸೂರಿಗೆ ದ್ವಿತೀಯ ಸ್ಥಾನ -Vishwanews24

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಮತ್ತೆ ಸ್ವಚ್ಛ ನಗರಿಯ ಗೌರವ ಲಭ್ಯವಾಗಿದೆ. ಸ್ವಚ್ಛ ಸರ್ವೇಕ್ಷಣೆಯಲ್ಲಿ ದೇಶದ 3 ರಿಂದ 10 ಲಕ್ಷ ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಸತತ ಎರಡು ಬಾರಿ ದೇಶದ ಸ್ವಚ್ಛ ನಗರಿ ಎಂಬ ಬಿರುದು ಪಡೆದ ಮೈಸೂರು ನಗರ ಇದೀಗ 2ನೇ ಸ್ಥಾನಕ್ಕೆ ತೃಪ್ತಿ ಪಟ್ಟಿದೆ.

ಸ್ವಚ್ಛ ಸರ್ವೇಕ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ನಗರಾಭಿವೃದ್ಧಿ ಸಚಿವಾಲಯದಿಂದ ಇದೇ ಜನವರಿ ತಿಂಗಳಿನಲ್ಲಿ ಮೈಸೂರು ಸುತ್ತಮುತ್ತ ಸರ್ವೇಕ್ಷಣಾ ಸರ್ವೇ ನಡೆಸಲಾಗಿತ್ತು. ಈ ಸ್ಫರ್ಧೆಯಲ್ಲಿ 4400ಕ್ಕೂ ಹೆಚ್ಚು ನಗರಗಳು ಭಾಗವಹಿಸಿದ್ದವು. ಛತ್ತೀಸ್‌ಗಢ ರಾಜ್ಯದ ಅಂಬಿಕಾಪುರ್ ನಗರ 5428.31 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದೆ. 5298.61 ಅಂಕ ಗಳಿಸಿದ ಮೈಸೂರು ದ್ವಿತೀಯ ಸ್ಥಾನ ಪಡೆದಿದೆ.

ನಗರಗಳ ಸ್ವಚ್ಛತಾ ಶ್ರೇಣಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಬೇಕಾಗಿತ್ತು. ಆದರೆ, ಕಾರ್ಯನಿಮಿತ್ತ ಅವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ಅವರ ಬದಲಿಗೆ ವಸತಿ ಸಚಿವ ಹರ್ದೀಪ್ ಸಿಂಗ್ ಪುರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಐದನೇ ಆವೃತ್ತಿಯ ಪ್ರಶಸ್ತಿ ಪುರಸ್ಕಾರಗಳು ಪ್ರಕಟವಾಗಿದೆ. 2020ರ ಸ್ವಚ್ಛ ಸರ್ವೇಕ್ಷಣಾ ಫಲಿತಾಂಶದಲ್ಲಿ ಒಟ್ಟು 129 ನಗರಗಳ ಸ್ಥಿತಿಗತಿ ಬಹಿರಂಗವಾಗಿದೆ.

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

10 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

10 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

10 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

11 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

11 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

11 hours ago