ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಮತ್ತೆ ಸ್ವಚ್ಛ ನಗರಿಯ ಗೌರವ ಲಭ್ಯವಾಗಿದೆ. ಸ್ವಚ್ಛ ಸರ್ವೇಕ್ಷಣೆಯಲ್ಲಿ ದೇಶದ 3 ರಿಂದ 10 ಲಕ್ಷ ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಸತತ ಎರಡು ಬಾರಿ ದೇಶದ ಸ್ವಚ್ಛ ನಗರಿ ಎಂಬ ಬಿರುದು ಪಡೆದ ಮೈಸೂರು ನಗರ ಇದೀಗ 2ನೇ ಸ್ಥಾನಕ್ಕೆ ತೃಪ್ತಿ ಪಟ್ಟಿದೆ.
ಸ್ವಚ್ಛ ಸರ್ವೇಕ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ನಗರಾಭಿವೃದ್ಧಿ ಸಚಿವಾಲಯದಿಂದ ಇದೇ ಜನವರಿ ತಿಂಗಳಿನಲ್ಲಿ ಮೈಸೂರು ಸುತ್ತಮುತ್ತ ಸರ್ವೇಕ್ಷಣಾ ಸರ್ವೇ ನಡೆಸಲಾಗಿತ್ತು. ಈ ಸ್ಫರ್ಧೆಯಲ್ಲಿ 4400ಕ್ಕೂ ಹೆಚ್ಚು ನಗರಗಳು ಭಾಗವಹಿಸಿದ್ದವು. ಛತ್ತೀಸ್ಗಢ ರಾಜ್ಯದ ಅಂಬಿಕಾಪುರ್ ನಗರ 5428.31 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದೆ. 5298.61 ಅಂಕ ಗಳಿಸಿದ ಮೈಸೂರು ದ್ವಿತೀಯ ಸ್ಥಾನ ಪಡೆದಿದೆ.
ನಗರಗಳ ಸ್ವಚ್ಛತಾ ಶ್ರೇಣಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಬೇಕಾಗಿತ್ತು. ಆದರೆ, ಕಾರ್ಯನಿಮಿತ್ತ ಅವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ಅವರ ಬದಲಿಗೆ ವಸತಿ ಸಚಿವ ಹರ್ದೀಪ್ ಸಿಂಗ್ ಪುರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಐದನೇ ಆವೃತ್ತಿಯ ಪ್ರಶಸ್ತಿ ಪುರಸ್ಕಾರಗಳು ಪ್ರಕಟವಾಗಿದೆ. 2020ರ ಸ್ವಚ್ಛ ಸರ್ವೇಕ್ಷಣಾ ಫಲಿತಾಂಶದಲ್ಲಿ ಒಟ್ಟು 129 ನಗರಗಳ ಸ್ಥಿತಿಗತಿ ಬಹಿರಂಗವಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…