ನವದೆಹಲಿ, : ಪ್ರಧಾನಿ ನರೇಂದ್ರ ಮೋದಿ ತಮ್ಮ ಮಹತ್ವಾಕಾಂಕ್ಷಿ ಸ್ವಚ್ಛ ಭಾರತ ಅಭಿಯಾನಕ್ಕಾಗಿ ಪ್ರತಿಷ್ಠಿತ ಬಿಲ್ ಮತ್ತು ಮಿಲಿಂದಾ ಗೇಟ್ಸ್ ಫೌಂಡೇಷನ್‌ನಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಅಮೆರಿಕ ಮೂಲದ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಪ್ರತಿಷ್ಠಾನ ಈ ಪ್ರಶಸ್ತಿ ನೀಡಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ ಸ್ವಚ್ಛಭಾರತ ಅಭಿಯಾನಕ್ಕೆ ಪ್ರಶಸ್ತಿ ಲಭ್ಯವಾಗಿದೆ. ಅಮೆರಿಕ ಮೂಲದ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಪ್ರತಿಷ್ಠಾನ ಈ ಪ್ರಶಸ್ತಿ ನೀಡುತ್ತಿದ್ದು, ಈ ತಿಂಗಳ ಅಂತ್ಯದಲ್ಲಿ ಅವರು ಅಮೆರಿಕಾ ಪ್ರವಾಸ ಕೈಗೊಳ್ಳುವ ವೇಳೆ ಈ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಈ ಕುರಿತು ಟ್ಟೀಟ್ ಮಾಡಿರುವ ಪಿಎಂಒ ಖಾತೆ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್, ಪ್ರಧಾನಿ ನರೇಂದ್ರ ಮೋದಿಯವರ “ಪರಿಶ್ರಮಶಾಲಿ ಮತ್ತು ನವೀನ” ಯೋಜನೆಗಳಿಗೆ ಜಗತ್ತಿನಾದ್ಯಂತ ಮೆಚ್ಚುಗೆಗಳು ಹರಿದು ಬರುತ್ತಿವೆ ಎಂದಿದ್ದಾರೆ. ಮತ್ತೊಂದು ಪ್ರಶಸ್ತಿಯ ಮೂಲಕ ಇದು ಭಾರತೀಯರೆಲ್ಲರಿಗೂ ಮತ್ತೊಮ್ಮೆ ಹೆಮ್ಮೆಯ ಕ್ಷಣ ಎಂದು ಟ್ಟೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಎನ್ಡಿಎ ಆಡಳಿತದ ಮೊದಲ ಅವಧಿಯಲ್ಲಿ ರಾಷ್ಟ್ರವನ್ನು ಬಯಲು ಶೌಚ ಮುಕ್ತವನ್ನಾಗಿಸುವ ಉದ್ದೇಶದಿಂದ 2014ರಲ್ಲಿ ಸ್ವಚ್ಛಭಾರತ ಅಭಿಯಾನಕ್ಕೆ ಚಾಲನೆ ನೀಡಿದ್ದರು. 2019ರ ವೇಳೆಗೆ 9 ಕೋಟಿ ಶೌಚಗೃಹಗಳನ್ನು ನಿರ್ಮಿಸಿ, ದೇಶವನ್ನು ಬಯಲು ಶೌಚ ಮುಕ್ತವನ್ನಾಗಿಸುವ ಗುರಿ ಹಾಕಿಕೊಂಡು, ಅ.2ರ ಗಾಂಧಿ ಜಯಂತಿಯಂದು ಅಭಿಯಾನ ಆರಂಭಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…