ನವದೆಹಲಿ: ದೇಶದ ಆರ್ಥಿಕ ಸ್ಥಿತಿಯ ಬಗ್ಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕಳವಳ ವ್ಯಕ್ತಪಡಿಸಿರುವುದನ್ನು ಖಂಡಿಸಿರುವ ಬಿಜೆಪಿ, ‘ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರವನ್ನು ಉತ್ತೇಜಿಸಲು ಕೆಲವರು ಮನಮೋಹನ್ ಸಿಂಗ್ ಅವರನ್ನು ಕೈಗೊಂಬೆಯಾಗಿಸಿಕೊಂಡಿದ್ದರು’ ಆರೋಪಿಸಿದೆ.
ಅರ್ಥ ವ್ಯವಸ್ಥೆಯ ಸ್ಥಿತಿ ‘ಭಾರಿ ಕಳವಳ’ಕಾರಿಯಾಗಿದೆ. ಕೇಂದ್ರ ಸರ್ಕಾರವು ‘ದ್ವೇಷ ಸಾಧಿಸುವ ರಾಜಕಾರಣ’ವನ್ನು ಬದಿಗಿಟ್ಟು ಆರ್ಥಿಕತೆಯನ್ನು ಸರಿಪಡಿಸುವತ್ತ ಗಮನ ಹರಿಸಬೇಕು. ‘ಮಾನವ ನಿರ್ಮಿತ ಬಿಕ್ಕಟ್ಟಿನಿಂದ’ ಆರ್ಥಿಕತೆಯನ್ನು ಸರಿದಾರಿಗೆ ತರಲು ತಜ್ಞರ ಸಲಹೆ ಪಡೆದುಕೊಳ್ಳಬೇಕು ಎಂದು ಸಿಂಗ್ ಹೇಳಿದ್ದರು. ಮಾತ್ರವಲ್ಲದೆ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಎಲ್ಲ ವಿಚಾರಗಳನ್ನೂ ಅತ್ಯಂತ ಕೆಟ್ಟದಾಗಿ ನಿರ್ವಹಣೆ ಮಾಡಿರುವುದು ಈಗಿನ ಆರ್ಥಿಕ ಕುಸಿತಕ್ಕೆ ಕಾರಣ ಎಂದೂ ಆರೋಪಿಸಿದ್ದರು.
ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, ‘ಅವರೊಬ್ಬ(ಮನಮೋಹನ್ ಸಿಂಗ್) ಅರ್ಥಶಾಸ್ತ್ರಜ್ಞ. ಆದರೆ, ಅವರ ಹಿಂದೆ ಇದ್ದ ವ್ಯಕ್ತಿಗಳು ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತವನ್ನು ಉತ್ತೇಜಿಸಲು ಅವರನ್ನು ಕೈಗೊಂಬೆಯಾಗಿಸಿಕೊಂಡಿದ್ದವು. ಇದರಿಂದ ದೇಶದ ಅರ್ಥ ವ್ಯವಸ್ಥೆಗೆ ಎಷ್ಟು ಅನ್ಯಾಯವಾಗಿದೆ ಎಂಬುದು ನಮಗೆ ಗೊತ್ತಿದೆ’ ಎಂದು ಕಿಡಿಕಾರಿದ್ದಾರೆ.
‘ಮೋದಿ ಸರ್ಕಾರದ ಆರ್ಥಿಕ ನೀತಿಗಳು ದೇಶವು ವಿಶ್ವದ ಬೃಹತ್ ಆರ್ಥಿಕತೆಗಳಲ್ಲಿ ಒಂದಾಗಲು ಸಹಾಯ ಮಾಡಿದೆ. ವಿಶ್ವ ಆರ್ಥಿಕತೆಯೂ ಮಂದಗತಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ದೇಶದ ಅರ್ಥ ವ್ಯವಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ದೇಶದ ಆರ್ಥಿಕತೆ ಉತ್ತಮ ತಳಪಾಯ ಹೊಂದಿರುವುದೇ ಅದಕ್ಕೆ ಕಾರಣ’ ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…