ಸ್ವಯಂ ರಕ್ಷಣೆಗಾಗಿ ಎಲ್ಲ ಹಿಂದೂಗಳಿಗೆ ಬಂದೂಕು ಪರವಾನಗಿ ನೀಡಬೇಕು : ಪ್ರಮೋದ ಮುತಾಲಿಕ್ – Vishwanews24

Featured, ರಾಜ್ಯ ನ್ಯೂಸ್

ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಅವರನ್ನು ಪಕ್ಷದಿಂದ ಉಚ್ಚಾಟಿಸಿರುವುದು ಖಂಡನೀಯ’

ಮುಸ್ಲಿಂ ರಾಷ್ಟ್ರಗಳ ಒತ್ತಡಕ್ಕೆ ಕೇಂದ್ರ ಸರ್ಕಾರ ಮಣಿಯಬಾರದು

ದೇವಸ್ಥಾನಗಳನ್ನು ಒಡೆದು ಕಟ್ಟಿದ ಮಸೀದಿ ಕಾನೂನು ಪ್ರಕಾರ ವಶಕ್ಕೆ ತೆಗೆದುಕೊಳ್ಳುತ್ತೇವೆ

ಬೆಳಗಾವಿ: ‘ಕೋಮು ಭಾವನೆ ಕೆರಳಿಸಿದ ಆರೋಪದಡಿ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಅವರನ್ನು ಪಕ್ಷದಿಂದ ಉಚ್ಚಾಟಿಸಿರುವುದು ಖಂಡನೀಯ’ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು.

ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೂಪುರ್‌ ಶರ್ಮಾ ಅವರೊಂದಿಗೆ ಬಿಜೆಪಿ ನಿಲ್ಲಬೇಕಿತ್ತು. ಆದರೆ, ಯಾರದ್ದೋ ಒತ್ತಡಕ್ಕೆ ಮಣಿದು ಉಚ್ಚಾಟನೆ ಮಾಡಿರುವುದು ಸರಿಯಲ್ಲ. ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಬೇಕು’ ಎಂದು ಆಗ್ರಹಿಸಿದರು.

‘ಹಿಂದೂ ಧರ್ಮಗಳ ಕುರಿತಾಗಿ ಮುಸ್ಲಿಮರು ಅಗೌರವ ತೋರಿದಾಗ, ಮುಸ್ಲಿಂ ರಾಷ್ಟ್ರದವರು ಒಂದೂ ಹೇಳಿಕೆ ನೀಡುವುದಿಲ್ಲ. ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿರುವ ಹಿಂದೂಗಳ ಸ್ಥಿತಿ ಬಗ್ಗೆ ಯಾರೂ ಮಾತನಾಡುವುದಿಲ್ಲ. ಆದರೆ, ನಮ್ಮ ಆಂತರಿಕ ವಿಚಾರಗಳಲ್ಲಿ ಅವರು ಮೂಗು ತೂರಿಸುವ ಅಗತ್ಯವಿಲ್ಲ. ಮುಸ್ಲಿಂ ರಾಷ್ಟ್ರಗಳ ಒತ್ತಡಕ್ಕೆ ಕೇಂದ್ರ ಸರ್ಕಾರ ಮಣಿಯಬಾರದು’  ಎಂದರು.

‘ಕಾಶ್ಮೀರದಲ್ಲಿ ಹಿಂದೂ ಶಿಕ್ಷಕರು ಮತ್ತು ಸರ್ಕಾರಿ ನೌಕರರನ್ನು ಹತ್ಯೆ ಮಾಡಲಾಗುತ್ತಿದೆ. ಅಲ್ಲಿನ ಹಿಂದೂಗಳನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಹಾಗಾಗಿ ಸ್ವಯಂ ರಕ್ಷಣೆಗಾಗಿ ಎಲ್ಲ ಹಿಂದೂಗಳಿಗೆ ಬಂದೂಕು ಪರವಾನಗಿ ನೀಡಬೇಕು’ ಎಂದೂ ಆಗ್ರಹಿಸಿದರು.

‘ಬೆಳಗಾವಿಯ ಶಾಹಿ ಮಸೀದಿ ಮಾತ್ರವಲ್ಲ; 30 ಸಾವಿರ ದೇವಸ್ಥಾನಗಳನ್ನು ಒಡೆದು ಮಸೀದಿ ಕಟ್ಟಿದ್ದಾರೆ ಎಂಬ ಬಗ್ಗೆ ದಾಖಲೆಗಳಿವೆ. ಕಾನೂನು ಪ್ರಕಾರವೇ ಅವುಗಳನ್ನೆಲ್ಲ ವಶಕ್ಕೆ ತೆಗೆದುಕೊಳ್ಳುತ್ತೇವೆ’ ಎಂದರು.

ಭಾರತದಲ್ಲಿ ಪ್ರಾಣಿಗಳಿಗೆ ಮೊದಲ ಕೊವಿಡ್ ಲಸಿಕೆ ಬಿಡುಗಡೆ – Vishwanews24

 

Leave a Reply