ಬೆಳಗಾವಿ: ‘ಕೋಮು ಭಾವನೆ ಕೆರಳಿಸಿದ ಆರೋಪದಡಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಪಕ್ಷದಿಂದ ಉಚ್ಚಾಟಿಸಿರುವುದು ಖಂಡನೀಯ’ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು.
ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೂಪುರ್ ಶರ್ಮಾ ಅವರೊಂದಿಗೆ ಬಿಜೆಪಿ ನಿಲ್ಲಬೇಕಿತ್ತು. ಆದರೆ, ಯಾರದ್ದೋ ಒತ್ತಡಕ್ಕೆ ಮಣಿದು ಉಚ್ಚಾಟನೆ ಮಾಡಿರುವುದು ಸರಿಯಲ್ಲ. ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಬೇಕು’ ಎಂದು ಆಗ್ರಹಿಸಿದರು.
‘ಹಿಂದೂ ಧರ್ಮಗಳ ಕುರಿತಾಗಿ ಮುಸ್ಲಿಮರು ಅಗೌರವ ತೋರಿದಾಗ, ಮುಸ್ಲಿಂ ರಾಷ್ಟ್ರದವರು ಒಂದೂ ಹೇಳಿಕೆ ನೀಡುವುದಿಲ್ಲ. ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿರುವ ಹಿಂದೂಗಳ ಸ್ಥಿತಿ ಬಗ್ಗೆ ಯಾರೂ ಮಾತನಾಡುವುದಿಲ್ಲ. ಆದರೆ, ನಮ್ಮ ಆಂತರಿಕ ವಿಚಾರಗಳಲ್ಲಿ ಅವರು ಮೂಗು ತೂರಿಸುವ ಅಗತ್ಯವಿಲ್ಲ. ಮುಸ್ಲಿಂ ರಾಷ್ಟ್ರಗಳ ಒತ್ತಡಕ್ಕೆ ಕೇಂದ್ರ ಸರ್ಕಾರ ಮಣಿಯಬಾರದು’ ಎಂದರು.
‘ಕಾಶ್ಮೀರದಲ್ಲಿ ಹಿಂದೂ ಶಿಕ್ಷಕರು ಮತ್ತು ಸರ್ಕಾರಿ ನೌಕರರನ್ನು ಹತ್ಯೆ ಮಾಡಲಾಗುತ್ತಿದೆ. ಅಲ್ಲಿನ ಹಿಂದೂಗಳನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಹಾಗಾಗಿ ಸ್ವಯಂ ರಕ್ಷಣೆಗಾಗಿ ಎಲ್ಲ ಹಿಂದೂಗಳಿಗೆ ಬಂದೂಕು ಪರವಾನಗಿ ನೀಡಬೇಕು’ ಎಂದೂ ಆಗ್ರಹಿಸಿದರು.
‘ಬೆಳಗಾವಿಯ ಶಾಹಿ ಮಸೀದಿ ಮಾತ್ರವಲ್ಲ; 30 ಸಾವಿರ ದೇವಸ್ಥಾನಗಳನ್ನು ಒಡೆದು ಮಸೀದಿ ಕಟ್ಟಿದ್ದಾರೆ ಎಂಬ ಬಗ್ಗೆ ದಾಖಲೆಗಳಿವೆ. ಕಾನೂನು ಪ್ರಕಾರವೇ ಅವುಗಳನ್ನೆಲ್ಲ ವಶಕ್ಕೆ ತೆಗೆದುಕೊಳ್ಳುತ್ತೇವೆ’ ಎಂದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…