Featured

ಸ್ವಾತಂತ್ರ್ಯದ 75ನೇ ವರ್ಷಾಚರಣೆ ಅಂಗವಾಗಿ 75 ಸಾವಿರ ಯುವಜನರಿಗೆ `ಅಮೃತ ಕೌಶಲ್ಯ ತರಬೇತಿ’ : ಅಶ್ವತ್ಥನಾರಾಯಣ – Vishwanews24

ಸ್ವಾತಂತ್ರ್ಯದ 75ನೇ ವರ್ಷಾಚರಣೆ ಅಂಗವಾಗಿ 75 ಸಾವಿರ ಯುವಜನರಿಗೆ `ಅಮೃತ ಕೌಶಲ್ಯ

ತರಬೇತಿ’ : ಸಚಿವ ಸಿ.ಎನ್ ಅಶ್ವತ್ಥನಾರಾಯಣ

ರಾಮನಗರ : ಸ್ವಾತಂತ್ರ್ಯದ 75ನೇ ವರ್ಷಾಚರಣೆ ಅಂಗವಾಗಿ 75 ಸಾವಿರ ಯುವಜನರಿಗೆ ಉಚಿತವಾಗಿ `ಅಮೃತ ಕೌಶಲ್ಯ ತರಬೇತಿ ‘ ನೀಡಲಾಗುತ್ತಿದೆ. ಈ ಪೈಕಿ ಮೊದಲ ಹಂತದಲ್ಲಿ 38 ಸಾವಿರಕ್ಕೂ ಹೆಚ್ಚು ಅರ್ಹರಿಗೆ ತರಬೇತಿ ನೀಡಲು ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕನಕಪುರ ತಾಲ್ಲೂಕಿನ ಮರಿಯಪ್ಪ ಮತ್ತು ಅವರ ಪತ್ನಿಯನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು.

ಪ್ರಧಾನಮಂತ್ರಿ ಮೋದಿಯವರ ಕನಸಾದ ಆತ್ಮನಿರ್ಭರ ಭಾರತವನ್ನು ಸಾಕಾರಗೊಳಿಸಲು, ಜಿಲ್ಲೆಯಲ್ಲಿ ಸ್ಕಿಲ್-ಹಬ್ ಯೋಜನೆ ಜಾರಿಗೊಳಿಸಲಾಗುವುದು. ಈ ಮೂಲಕ ಜಿಲ್ಲೆಯ ಪ್ರತೀ ಕೌಶಲ್ಯ ಕೇಂದ್ರದಲ್ಲೂ 3,000 ಉದ್ಯಮಿಗಳಿಗೆ ಸೂಕ್ತ ವಾತಾವರಣ ಸೃಷ್ಟಿಸಲಾಗುವುದು ಎಂದು ಅವರು ತಿಳಿಸಿದರು.

ರಾಜಧಾನಿಯ ಪಕ್ಕದಲ್ಲೇ ಇರುವ ಜಿಲ್ಲೆಯನ್ನು ಕೃಷಿ, ಕೈಗಾರಿಕೆ, ಆರೋಗ್ಯಸೇವೆ, ಶಿಕ್ಷಣ ಮತ್ತು ಪ್ರವಾಸೋದ್ಯಮಗಳನ್ನು ಮುಖ್ಯವಾಗಿ ಇಟ್ಟುಕೊಂಡು ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ಹಾರೋಹಳ್ಳಿಯಲ್ಲಿ ಮಹಿಳೆಯರಿಗೆಂದೇ 300 ಎಕರೆ ವಿಶಾಲವಾದ ಉದ್ದಿಮೆಗಳ ಪಾರ್ಕ್ ಸ್ಥಾಪಿಸಲಾಗಿದೆ. ಇಲ್ಲಿ 100 ಮಹಿಳೆಯರು ತಮ್ಮ ಘಟಕಗಳನ್ನು ಆರಂಭಿಸಿದ್ದಾರೆ ಎಂದು ಅವರು ನುಡಿದರು.

ಶಿವಮೊಗ್ಗ : ರಾತ್ರಿ ಅನಗತ್ಯ ಬೈಕ್ ಸಂಚಾರ ನಿಷೇಧ ..

ನದಿ, ಅರಣ್ಯ, ಜಲಪಾತ, ಪುರಾತನ ದೇಗುಲಗಳು, ಕೋಟೆಕೊತ್ತಲಗಳು, ಬೆಟ್ಟಗಳನ್ನು ಹೊಂದಿರುವ ಜಿಲ್ಲೆಯಲ್ಲಿ, ಇತ್ತೀಚೆಗೆ ಮೊಟ್ಟಮೊದಲ ಪ್ರವಾಸೋದ್ಯಮ ಶೃಂಗಸಭೆ ನಡೆಸಿ, ಚರ್ಚಿಸಲಾಗಿದೆ. ಇದರಲ್ಲಿ 63 ಹೂಡಿಕೆದಾರರು ಪಾಲ್ಗೊಂಡಿದ್ದು, ಜಿಲ್ಲೆಯಲ್ಲಿ ಪ್ರವಾಸ ಮತ್ತು ಆತಿಥ್ಯೋದ್ಯಮ ಬೆಳೆಸಲು ಆಸಕ್ತಿ ತೋರಿದ್ದಾರೆ ಎಂದು ಅವರು ವಿವರಿಸಿದರು.

ರಾಮನಗರದಲ್ಲಿರುವ ಸರಕಾರಿ ಎಂಜಿನಿಯರಿಂಗ್ ಕಾಲೇಜನ್ನು 70 ಕೋಟಿ ರೂ. ವೆಚ್ಚದಲ್ಲಿ ಐಐಟಿ ದರ್ಜೆಗೆ ಏರಿಸಲಾಗುವುದು. ಸರಕಾರಿ ಶಾಲೆಗಳ ಬಲವರ್ಧನೆಯ ದೃಷ್ಟಿಯಿಂದ ಪ್ರತೀ ಪಂಚಾಯಿತಿ ಮಟ್ಟದಲ್ಲೂ ಮಾದರಿ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಜಿಲ್ಲಾ ಕೇಂದ್ರದಲ್ಲಿ ತಲೆ ಎತ್ತುತ್ತಿರುವ ವೈದ್ಯಕೀಯ ಕಾಲೇಜಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೂ ಆರಂಭವಾಗಲಿದೆ. ಆಯುಷ್ಮಾನ್ ಭಾರತ ಯೋಜನೆಯಡಿ ಜಿಲ್ಲೆಯಲ್ಲಿ 4.34 ಲಕ್ಷ ಮಂದಿಗೆ ಆರೋಗ್ಯ ಕಾರ್ಡ್ ವಿತರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜಲಜೀವನ್ ಮಿಷನ್ ಅಡಿ ಕೈಗೊಂಡಿರುವ ಕಾಮಗಾರಿಗಳು 2023ರೊಳಗೆ ಮುಗಿಯಲಿದ್ದು, ಜಿಲ್ಲೆಯ ಪ್ರತಿಯೊಂದು ಮನೆಗೂ ನದೀಮೂಲದ ಕುಡಿಯುವ ನೀರು ಪೂರೈಸಲಾಗುವುದು. ಇದರ ಜತೆಗೆ ಕೃಷಿಗೆ ನೆರವು ನೀಡಲು ಅರ್ಕಾವತಿ ಹಿನ್ನೀರು, ದೊಡ್ಡಾಲಹಳ್ಳಿ ಸೂಕ್ಷ್ಮ ನೀರಾವರಿ ಯೋಜನೆ, ಗರಕಹಳ್ಳಿ ಮತ್ತು ಕಣ್ವ ಜಲಾಶಯಗಳಿಂದ 132 ಕೆರೆಗಳಿಗೆ ನೀರು ತುಂಬಿಸಲಾಗುವುದು. ಇದರ ಜತೆಗೆ ಮಂಚನಬೆಲೆ, ವೈ.ಜಿ.ಗುಡ್ಡ ಮತ್ತು ಶ್ರೀರಂಗ ಯೋಜನೆಗಳ ಮೂಲಕ ಕೃಷಿಗೆ ಬಲ ತುಂಬಲಾಗುವುದು ಎಂದು ಸಚಿವರು ವಿವರಿಸಿದರು.

🚫 ಉಡುಪಿ: ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ ; ಜಿಲ್ಲೆಯಾದ್ಯಂತ ಹೈಅಲರ್ಟ್ – Vishwanews24

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago