ವಿಜಯಪುರ: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಇಂದು ವಿಜಯಪುರದಲ್ಲಿ ಪಂಚಮಸಾಲಿ ಹೋರಾಟದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಹೇಳಿದರು.
ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ, ಎಲ್ಲರಿಗೂ ಕಾನೂನು ಒಂದೇ. ನನಗೂ, ಸ್ವಾಮೀಜಿಗೂ ಎಲ್ಲರಿಗೂ ಒಂದೇ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ, ಸಂವಿಧಾನದ 14 ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ ಕಾನೂನು ಸಮಾನ ರಕ್ಷಣೆಯನ್ನು ಖಾತ್ರಿಪಡಿಸುತ್ತದೆ. ಸ್ವಾಮೀಜಿಗಳಿಗೂ ಅವರ ಅಭಿಪ್ರಾಯ ತಿಳಿಸಲು ಸ್ವಾತಂತ್ರ್ಯವಿದೆ. ಅಂತಿಮವಾಗಿ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತೇವೆ ಎಂದು ಹೇಳಿದರು.
ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿ ಸಮುದಾಯದ ಜನರ ಮೇಲೆ ಪೊಲೀಸರು ಕಲ್ಲು ಹೊಡೆದಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದೆ. ವಾಸ್ತವವಾಗಿ ಬಿಜೆಪಿಗರು ಕಲ್ಲು ಹೊಡೆದಿರುವುದು ಎಂದು ಹೇಳಿದ ಸಿಎಂ ಸಿದ್ದರಾಮಯ್ಯ, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗುವುದರ ಫೋಟೋಗಳನ್ನು ತೋರಿಸುತ್ತೇವೆ. ಸ್ವಾಮೀಜಿಗಳು ರಸ್ತೆಯಲ್ಲಿ ಏಕೆ ಕುಳಿತುಕೊಂಡಿದ್ದಾರೆ? ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು. ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ? ನಾನು ಹೇಳಿರುವುದಕ್ಕೆ ಸಾಕ್ಷಿಯಿದೆ ಎಂದು ಖಡಕ್ ಆಗಿ ಹೇಳಿದರು.
ಪಂಚಮಸಾಲಿ ಸಮಾಜದವರು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮುಂದೆ ಹೋಗಬೇಕು. ಬಿಜೆಪಿ ಕಾಲದಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗಡೆಯವರ ವರದಿಯಲ್ಲಿ ಈಗಿರುವಂತೆಯೇ ಪ್ರವರ್ಗ 2ಎ 2ಬಿ ಇರಬೇಕು. ಇದಕ್ಕೆ ಹೊಸ ಸೇರ್ಪಡೆಯಾಗಬಾರದು. 2ಬಿ ಯಲ್ಲಿರುವ 4% ಮೀಸಲಾತಿಯನ್ನು ರದ್ದು ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ, ಹೇಳಿದರು.
ಬಿಜೆಪಿ ಅವಧಿಯಲ್ಲಿ ಆಗಿದ್ದಕ್ಕೆ ಅಂದು ಪ್ರತಿಭಟನೆ ಏಕಾಗಲಿಲ್ಲ? ಈಗ ಅದೇ ಬಿಜೆಪಿಯವರು ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದು ಆರೋಪಿಸಿದ ಸಿಎಂ ಸಿದ್ದರಾಮಯ್ಯ, ಮುಸಲ್ಮಾನರಿಗೆ ಇದ್ದ ಶೇ.4 ರ ಮೀಸಲಾತಿಯನ್ನು ರದ್ದುಮಾಡಿ 3ಎ ಒಕ್ಕಲಿಗರಿಗೆ 2% ಮತ್ತು 3ಬಿ ಪ್ರವರ್ಗಗಳಿಗೆ ಲಿಂಗಾಯತರಿಗೆ 2% ಮೀಸಲಾತಿ ನೀಡಿದರು. ಇದನ್ನು ಪ್ರಶ್ನಿಸಿ ಮುಸಲ್ಮಾನರಾದ ರಸೂಲ್ ಎಂಬ ವ್ಯಕ್ತಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ವೇಳೆ ಹಿಂದಿನ ಬಿಜೆಪಿ ಸರ್ಕಾರವೇ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿತ್ತು ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…