ಸ್ವಾಮೀಜಿ ಸಿಕ್ಕಿ ಹಾಕಿಕೊಳ್ಳಲಿ, ಇನ್ನೂ ದೊಡ್ಡ ದೊಡ್ಡ ಹೆಸರು ಹೊರಗೆ ಬರುತ್ತದೆ : ಚೈತ್ರಾ ಕುಂದಾಪುರ – Vishwanews24

Featured, ಉಡುಪಿ, ರಾಜ್ಯ ನ್ಯೂಸ್

ಸ್ವಾಮೀಜಿ ಸಿಕ್ಕಿ ಹಾಕಿಕೊಳ್ಳಲಿ, ಇನ್ನೂ ದೊಡ್ಡ ದೊಡ್ಡ ಹೆಸರು ಹೊರಗೆ ಬರುತ್ತದೆ : ಚೈತ್ರಾ ಕುಂದಾಪುರ

ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ವಂಚಿಸಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ  ರೋಚಕ ವಿಚಾರವನ್ನು ಬಹಿರಂಗ ಪಡಿಸಿದ್ದಾಳೆ. ಮಹಿಳಾ ಸಾಂತ್ವಾನ ಕೇಂದ್ರದಿಂದ ಸಿಸಿಬಿ (CCB) ಕಚೇರಿಗೆ ಕರೆ ತಂದ ವೇಳೆ ಸ್ವಾಮೀಜಿ ಬಂಧನದ ನಂತರ ದೊಡ್ಡವರ ಹೆಸರುಗಳು ಬಯಲಾಗಲಿದೆ ಎಂದಿದ್ದಾಳೆ.

ಇಂದು ಬೆಳಿಗ್ಗೆ ಸಿಸಿಬಿ ಕಚೇರಿಗೆ ಬರುವ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಚೈತ್ರಾ ಕುಂದಾಪುರ ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಇನ್ನೂ ದೊಡ್ಡ ದೊಡ್ಡ ಹೆಸರು ಹೊರಗೆ ಬರುತ್ತದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮೊದಲು ಈ ಪ್ರಕರಣದಲ್ಲಿ ಸ್ವಾಮೀಜಿಗಳು ಸಿಕ್ಕಿ ಹಾಕಿಕೊಳ್ಳಲಿ. ಎಲ್ಲಾ ಸತ್ಯ ಗೊತ್ತಾಗುತ್ತೆ ಸರ್. ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ. ಇಂದಿರಾ ಕ್ಯಾಂಟೀನ್ ಬಿಲ್ ಪೆಡ್ಡಿಂಗ್ ಇರೋ ಕಾರಣ ಈ ಷಡ್ಯಂತ್ರ ರಚನೆಯಾಗಿದೆ. ಎ1 ಆರೋಪಿ ನಾನೇ ಆಗಿರಬಹುದು. ಸ್ವಾಮೀಜಿ ಸಿಕ್ಕ ನಂತರವೇ ಎಲ್ಲವೂ ಗೊತ್ತಾಗಲಿದೆ ಎಂದು ಹೇಳುತ್ತಾ ಚೈತ್ರಾ ಪೊಲೀಸ್ ಕಚೇರಿ ಒಳಗೆ ಹೋಗಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ಸೇರಿದಂತೆ ಕರ್ನಾಟಕದ 161 ತಾಲೂಕು ಬರಪೀಡಿತ ಎಂದು ಘೋಷಣೆ – Vishwanews24

Leave a Reply