Featured

ಹಕ್ಕಿ ಜ್ವರದ ಬಗ್ಗೆ ಜಾಗೃತಿ ವಹಿಸಿ : ಎಲ್ಲಾ ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಮೋದಿ ಸಲಹೆ -Vishwanews24

ಹಕ್ಕಿ ಜ್ವರದ ಬಗ್ಗೆ ಜಾಗೃತಿ ವಹಿಸಿ : ಎಲ್ಲಾ ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಮೋದಿ ಸಲಹೆ –Vishwanews24

ನವದೆಹಲಿ: ಕೋವಿಡ್​​ ಅಬ್ಬರದ ಬೆನ್ನಲ್ಲೇ ದೇಶಕ್ಕೆ ಹಕ್ಕಿಜ್ವರ ಕಾಲಿಟ್ಟಿದೆ. ಕೇರಳ, ರಾಜಸ್ಥಾನ, ಹಿಮಾಚಲ ಪ್ರದೇಶ, ಗುಜರಾತ್, ಉತ್ತರ ಪ್ರದೇಶ, ಹರಿಯಾಣ, ಮಧ್ಯಪ್ರದೇಶ, ದೆಹಲಿ ಹಾಗು ಮಹಾರಾಷ್ಟ್ರಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಕೊರೊನಾ ಲಸಿಕೆ ಸಂಬಂಧ ಸಿಎಂಗಳ ಜತೆ ಸಂವಾದ ನಡೆಸಿದ ಮೋದಿ, ಹಕ್ಕಿ ಜ್ವರದ ಬಗ್ಗೆಯೂ ಜಾಗೃತಿ ವಹಿಸುವಂತೆ ಸೂಚಿಸಿದ್ದಾರೆ.

ಈಗಾಗಲೇ ಕೋವಿಡ್​ನಿಂದ ತತ್ತರಿಸಿರುವ ರಾಜ್ಯಗಳಲ್ಲಿ ಹಕ್ಕಿಜ್ವರವೂ ವ್ಯಾಪಕವಾಗಿ ಹರಡುತ್ತಿದೆ. ಈ ರೋಗವನ್ನು ನಿಯಂತ್ರಿಸಲು ಕೋಳಿ ಸಾಕಾಣಿಕೆ ಕೇಂದ್ರ, ಮೃಗಾಲಯ ಹಾಗೂ ಜಲಮೂಲಗಳ ಮೇಲೆ ನಿಗಾವಹಿಸುವಂತೆ ಮುಖ್ಯಮಂತ್ರಿಗಳಿಗೆ ನಮೋ ಸಲಹೆ ನೀಡಿದ್ದಾರೆ.

ಹಕ್ಕಿಜ್ವರ ದೃಢಪಟ್ಟಿರುವ ಬಹುತೇಕ ರಾಜ್ಯಗಳಲ್ಲಿ ಕೋಳಿ ಆಮದನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಉತ್ತರಾಖಂಡದಲ್ಲಿ ಸಂಪೂರ್ಣ ಎಚ್ಚರಿಕೆ ವಹಿಸುವಂತೆ ಮುಖ್ಯ ವೈದ್ಯಕೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಕರ್ನಾಟಕದಲ್ಲಿಯೂ ರೋಗ ಹರಡದಂತೆ ಹಲವು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಈವರೆಗೂ ಹಕ್ಕಿಜ್ವರ ಪತ್ತೆಯಾಗಿಲ್ಲ. ಜನತೆ ಭಯ ಪಡುವುದು ಬೇಡ ಅಂತಾ ಸಚಿವ ಡಾ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

http://ಬಿಜೆಪಿ ನನ್ನ ಬಗ್ಗೆ ಭಯಭೀತವಾಗಿದೆ, ಯಾಕೆಂದರೆ ನನ್ನನ್ನು ಖರೀದಿಸಲು ಸಾಧ್ಯವಿಲ್ಲ : ಮಮತಾ ಬ್ಯಾನರ್ಜಿ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

17 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

17 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

18 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

18 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

22 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

22 hours ago