ನವದೆಹಲಿ: ಕೋವಿಡ್ ಅಬ್ಬರದ ಬೆನ್ನಲ್ಲೇ ದೇಶಕ್ಕೆ ಹಕ್ಕಿಜ್ವರ ಕಾಲಿಟ್ಟಿದೆ. ಕೇರಳ, ರಾಜಸ್ಥಾನ, ಹಿಮಾಚಲ ಪ್ರದೇಶ, ಗುಜರಾತ್, ಉತ್ತರ ಪ್ರದೇಶ, ಹರಿಯಾಣ, ಮಧ್ಯಪ್ರದೇಶ, ದೆಹಲಿ ಹಾಗು ಮಹಾರಾಷ್ಟ್ರಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಕೊರೊನಾ ಲಸಿಕೆ ಸಂಬಂಧ ಸಿಎಂಗಳ ಜತೆ ಸಂವಾದ ನಡೆಸಿದ ಮೋದಿ, ಹಕ್ಕಿ ಜ್ವರದ ಬಗ್ಗೆಯೂ ಜಾಗೃತಿ ವಹಿಸುವಂತೆ ಸೂಚಿಸಿದ್ದಾರೆ.
ಈಗಾಗಲೇ ಕೋವಿಡ್ನಿಂದ ತತ್ತರಿಸಿರುವ ರಾಜ್ಯಗಳಲ್ಲಿ ಹಕ್ಕಿಜ್ವರವೂ ವ್ಯಾಪಕವಾಗಿ ಹರಡುತ್ತಿದೆ. ಈ ರೋಗವನ್ನು ನಿಯಂತ್ರಿಸಲು ಕೋಳಿ ಸಾಕಾಣಿಕೆ ಕೇಂದ್ರ, ಮೃಗಾಲಯ ಹಾಗೂ ಜಲಮೂಲಗಳ ಮೇಲೆ ನಿಗಾವಹಿಸುವಂತೆ ಮುಖ್ಯಮಂತ್ರಿಗಳಿಗೆ ನಮೋ ಸಲಹೆ ನೀಡಿದ್ದಾರೆ.
ಹಕ್ಕಿಜ್ವರ ದೃಢಪಟ್ಟಿರುವ ಬಹುತೇಕ ರಾಜ್ಯಗಳಲ್ಲಿ ಕೋಳಿ ಆಮದನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಉತ್ತರಾಖಂಡದಲ್ಲಿ ಸಂಪೂರ್ಣ ಎಚ್ಚರಿಕೆ ವಹಿಸುವಂತೆ ಮುಖ್ಯ ವೈದ್ಯಕೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಕರ್ನಾಟಕದಲ್ಲಿಯೂ ರೋಗ ಹರಡದಂತೆ ಹಲವು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಈವರೆಗೂ ಹಕ್ಕಿಜ್ವರ ಪತ್ತೆಯಾಗಿಲ್ಲ. ಜನತೆ ಭಯ ಪಡುವುದು ಬೇಡ ಅಂತಾ ಸಚಿವ ಡಾ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…