ಬೆಂಗಳೂರು: ನಗರದ ನಾಗವಾರ ಬಳಿಯ ಹಜ್ ಭವನಕ್ಕೆ ಟಿಪ್ಪು ಸುಲ್ತಾನ ಹೆಸರಿಡಲು ಸಚಿವ ಜಮೀರ್ ಅಹ್ಮದ್ ಆಸಕ್ತಿ ತೋರಿದ್ದಾರೆ. ಮುಸ್ಲಿಂ ಧರ್ಮಗುರುಗಳು ಹಜ್ ಭವನಕ್ಕೆ ಟಿಪ್ಪು ಸುಲ್ತಾನ ಹೆಸರಿಡಲು ಒತ್ತಾಯಿಸುತ್ತಿದ್ದಾರೆ.
ಮತ್ತೆ ಐತಿಹಾಸಿಕ ವಿವಾದ ಪುರುಷನಾದ ಟಿಪ್ಪು ಸುಲ್ತಾನ್ ಹೆಸರು ಪ್ರಸ್ತಾಪಿಸಿರುವ ಸಚಿವ ಜಮೀರ್ ಅಹ್ಮದ್ ಖಾನ್, ಬೆಂಗಳೂರಿನ ಹೆಗೆಡ ನಗರದ ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ಹಜ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ನಂತರ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಟಿಪ್ಪು ಹೆಸರು ಇಡುತ್ತೇವೆ ಎಂದು ತಿಳಿಸಿದ್ದಾರೆ.
ಕುಮಾರಸ್ವಾಮಿ ಸರ್ಕಾರವನ್ನು ವಿವಾದಕ್ಕೆ ಸಿಲುಕಿಸುವಂತ ನಿರ್ಧಾರ ಕೈಗೆತ್ತಿಕೊಳ್ಳುತ್ತಿರುವ ಸಚಿವ ಅಹ್ಮದ್, ದೋಸ್ತಿ ಸರ್ಕಾರದ ಈ ಸಚಿವರು ಇಂತಹ ನಿರ್ಣಯ ಕೈಗೊಂಡರೆ ಹೆಚ್ ಡಿ ಕೆ ಸರ್ಕಾರಕ್ಕೆ ಕಂಟಕ ತಪ್ಪಿದಲ್ಲ.
ಈ ಹಿಂದೆ ಕಾಂಗ್ರೆಸ್ ಸರ್ಕಾರ ಟಿಪ್ಪು ಜಯಂತಿ ಆಚರಿಸಿತ್ತು. ಆದ್ರೆ ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ಸೇರಿದಂತೆ ಹಲವು ಹಿಂದೂ ಸಂಘಟನೆಗಳು ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದವು. ಸಿದ್ದು ಸರ್ಕಾರ ಇನ್ನಿಲ್ಲದಂತೆ ಕಾಡಿದ್ದ ಟಿಪ್ಪು ವಿವಾದವನ್ನು ಹೆಚ್ ಡಿ ಕೆ ತನ್ನ ಮೈ ಮೇಲೆ ಎಳೆದು ಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…