ಬೆಂಗಳೂರು : ಹಣಕಾಸು ಇಲಾಖೆಯವರು ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಗಳ ಬಳಿ ಮಾತನಾಡಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಸದನದಲ್ಲಿ ಉತ್ತರ ಕೊಟ್ಟಿದ್ದಾರೆ ಎಂದರು.
ಅನರ್ಹ ರೇಷನ್ ಕಾರ್ಡ್ ರದ್ದಾಗಿರುವ ಕಾರಣ ಕೆಲವರಿಗೆ ಹಣ ಸಂದಾಯವಾಗಿಲ್ಲ. ಆಹಾರ ಇಲಾಖೆಯಿಂದ ಹೊಸ ಡೇಟಾ ಬಂದ ತಕ್ಷಣ ಅವರಿಗೂ ದುಡ್ಡು ರಿಲೀಸ್ ಆಗಲಿದೆ. ರೇಷನ್ ಕಾರ್ಡ್ ಆಧರಿಸಿ ನಾವು ಗೃಹಲಕ್ಷ್ಮಿ ಫಲಾನುಭವಿಗಳಿಗೆ ದುಡ್ಡು ಹಾಕುತ್ತಿದ್ದೇವೆ. ಕೆಲ ರೇಷನ್ ಕಾರ್ಡ್ ರದ್ದಾದಾಗ ದುಡ್ಡು ಹೋಲ್ಡ್ ಆಗಿರಬಹುದು. ಆದರೆ, ಅವರು ತೆರಿಗೆ ಪಾವತಿದಾರರಲ್ಲದಿದ್ದಲ್ಲಿ ಹಣ ಸಿಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಗೃಹಲಕ್ಷ್ಮಿ ಸಹಕಾರ ಸಂಘಕ್ಕೆ ಸದಸ್ಯರಾದವರು ಪ್ರತಿ ತಿಂಗಳು 200 ರೂಪಾಯಿ ಹಣ ಕಟ್ಟಿಕೊಂಡು ಹೋಗಬೇಕು. 6 ತಿಂಗಳು ಆದ ಬಳಿಕ ಸಾಲ ಸೌಲಭ್ಯ ಪಡೆಯಲು ಅರ್ಹರಾಗುತ್ತಾರೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…