Featured

ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣ ಎರಡು ತಿಂಗಳ ಗೃಹಲಕ್ಷ್ಮಿ ಹಣ ಪಾವತಿ : ಲಕ್ಷ್ಮೀ ಹೆಬ್ಬಾಳ್ಕರ್‌ – vishwanews24

ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣ ಎರಡು ತಿಂಗಳ ಗೃಹಲಕ್ಷ್ಮಿ ಹಣ ಪಾವತಿ : ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು : ಹಣಕಾಸು ಇಲಾಖೆಯವರು ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಗಳ ಬಳಿ ಮಾತನಾಡಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಸದನದಲ್ಲಿ ಉತ್ತರ ಕೊಟ್ಟಿದ್ದಾರೆ ಎಂದರು.

ಅನರ್ಹ ರೇಷನ್‌ ಕಾರ್ಡ್ ರದ್ದಾಗಿರುವ ಕಾರಣ ಕೆಲವರಿಗೆ ಹಣ ಸಂದಾಯವಾಗಿಲ್ಲ. ಆಹಾರ ಇಲಾಖೆಯಿಂದ ಹೊಸ ಡೇಟಾ ಬಂದ ತಕ್ಷಣ ಅವರಿಗೂ ದುಡ್ಡು ರಿಲೀಸ್ ಆಗಲಿದೆ. ರೇಷನ್ ಕಾರ್ಡ್ ಆಧರಿಸಿ ನಾವು ಗೃಹಲಕ್ಷ್ಮಿ ‌ಫಲಾನುಭವಿಗಳಿಗೆ ದುಡ್ಡು ಹಾಕುತ್ತಿದ್ದೇವೆ. ಕೆಲ ರೇಷನ್ ಕಾರ್ಡ್ ರದ್ದಾದಾಗ ದುಡ್ಡು ಹೋಲ್ಡ್ ಆಗಿರಬಹುದು. ಆದರೆ, ಅವರು ತೆರಿಗೆ ಪಾವತಿದಾರರಲ್ಲದಿದ್ದಲ್ಲಿ ಹಣ ಸಿಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಗೃಹಲಕ್ಷ್ಮಿ ಸಹಕಾರ ಸಂಘಕ್ಕೆ ಸದಸ್ಯರಾದವರು ಪ್ರತಿ ತಿಂಗಳು 200 ರೂಪಾಯಿ ಹಣ ಕಟ್ಟಿಕೊಂಡು ಹೋಗಬೇಕು. 6 ತಿಂಗಳು ಆದ ಬಳಿಕ ಸಾಲ ಸೌಲಭ್ಯ ಪಡೆಯಲು ಅರ್ಹರಾಗುತ್ತಾರೆ ಎಂದರು.

 

 

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

7 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

7 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

7 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

7 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

7 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

7 days ago