Featured

ಹಣ ಪಾವತಿಸಿ ಇಲ್ಲವೇ ಜೈಲು ಶಿಕ್ಷೆಯನ್ನು ಎದುರಿಸಿ : ಅನಿಲ್ ಅಂಬಾನಿಗೆ ಸುಪ್ರೀಂ ಕೋರ್ಟ್‌ ಆದೇಶ – Vishwanews24

ಹೊಸದಿಲ್ಲಿ : ಟೆಲಿಕಾಂ ಉಪಕರಣ ಉತ್ಪಾದನಾ ಸಂಸ್ಥೆ ಎರಿಕ್‌ಸನ್‌ ಗೆ 550 ಕೋಟಿ ರೂ. ಬಾಕಿ ಪಾವತಿಸದಿರುವ ಮೂಲಕ ಆರ್‌ ಕಾಮ್‌ ಅಧ್ಯಕ್ಷ ಅನಿಲ್‌ ಅಂಬಾನಿ ಅವರು ಉದ್ದೇಶಪೂರ್ವಕ ಸುಪ್ರೀಂ ಕೋರ್ಟ್‌ ಆದೇಶದ ಉಲ್ಲಂಘನೆ ಮಾಡಿ ಕೋರ್ಟ್‌ ನಿಂದನೆ ಎಸಗಿದ್ದಾರೆ; ಆದುದರಿಂದ ಅವರು ಕೋರ್ಟ್‌ ನಿಂದನೆಯ ಕಾನೂನು ಕ್ರಮದಿಂದ ಪಾರಾಗಲು ನಾಲ್ಕು ವಾರಗಳ ಒಳಗೆ 453 ಕೋಟಿ ರೂ. ಪಾವತಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಇಂದು  ಹೇಳಿತು.

ನಾಲ್ಕು ವಾರಗಳ ಒಳಗೆ 453 ಕೋಟಿ ರೂ. ಪಾವತಿಸದಿದ್ದರೆ ಆರೋಪಿಗಳು ಮೂರು ತಿಂಗಳ ಜೈಲು ಶಿಕ್ಷೆಯನ್ನು ಎದುರಿಸಬೇಕಾದೀತು ಎಂದು ಜಸ್ಟಿಸ್‌ ಆರ್‌ ಎಫ್ ನಾರೀಮನ್‌ ಮತ್ತು ವಿನೀತ್‌ ಶರಣ್‌ ಅವರನ್ನು ಒಳಗೊಂಡ ಪೀಠ ಎಚ್ಚರಿಕೆ ನೀಡಿತು.

ಹಾಗೆಯೇ ರಿಲಯನ್ಸ್‌ ಟೆಲಿಕಾಂ ಮತ್ತು ರಿಲಯನ್ಸ್‌ ಇನ್‌ಫ್ರಾಟೆಲ್‌ ತಲಾ 1 ಕೋಟಿ ರೂ.ಗಳನ್ನು ನಾಲ್ಕು ವಾರಗಳ ಒಳಗೆ ಸರ್ವೋಚ್ಚ ನ್ಯಾಯಾಲಯದ ರಿಜಿಸ್ಟ್ರಿಗೆ ಪಾವತಿಸಬೇಕು; ಇಲ್ಲದಿದ್ದರೆ ಅಧ್ಯಕ್ಷ ಅನಿಲ್‌ ಅಂಬಾನಿ ಅವರು ಒಂದು ತಿಂಗಳ ಹೆಚ್ಚುವರಿ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುವುದು ಎಂದು ಕೋರ್ಟ್‌ ಹೇಳಿತು.

ರಿಲಯನ್ಸ್‌ ಗ್ರೂಪ್‌ ಈಗಾಗಲೇ ಕೋರ್ಟ್‌ ರಿಜಿಸ್ಟ್ರಿಯಲ್ಲಿ ಠೇವಣಿ ಇರಿಸಿರುವ 118 ಕೋಟಿ ರೂ.ಗಳನ್ನು ಎರಿಕ್‌ಸನ್‌ ಕಂಪೆನಿಗೆ ಬಿಡುಗಡೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ ಆದೇಶಿಸಿ

ತು. 

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

1 hour ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

1 hour ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

21 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

23 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

24 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

24 hours ago