Featured

ಹಣ ಸುಲಿಗೆ ಪ್ರಕರಣ : ನಿರೂಪಕಿ ದಿವ್ಯ ವಸಂತ ಬಂಧನ ! – vishwanews24

ಹಣ ಸುಲಿಗೆ ಪ್ರಕರಣ : ನಿರೂಪಕಿ ದಿವ್ಯ ವಸಂತ ಬಂಧನ

ಬೆಂಗಳೂರು:’ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪದ ಬೆನ್ನಲ್ಲೇ ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತ ಬಂಧನವಾಗಿದೆ. ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ.

ದಿವ್ಯ ವಸಂತ ಮತ್ತು ಗ್ಯಾಂಗ್ ನಿಂದ ಇಂದಿರಾನಗರದಲ್ಲಿರುವ ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಯತ್ನ ಪ್ರಕರಣ ಇದಾಗಿದ್ದು, ಈ ಕೇಸ್‌ ನಲ್ಲಿ ತಮ್ಮನ ಬಂಧನ ನಂತರ ಪರಾರಿಯಾಗಿ ತಲೆಮರೆಸಿಕೊಂಡಿದ್ದ ದಿವ್ಯ ವಸಂತ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.

ಒಂದು ವಾರದಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ದಿವ್ಯ ತಮಿಳುನಾಡಿನಿಂದ ಕೇರಳದಲ್ಲಿ ತಲೆ ಮರೆಸಿಕೊಂಡಿದ್ದಳು. ಸದ್ಯ ಕೇರಳದಿಂದ ಬಂಧಿಸಿ ಕರೆತಂದಿರುವ ಜೀವನ್ ಭೀಮಾನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇಂದಿರಾನಗರ ‘ಸ್ಪಾ’ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರು. ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ರಾಜ್ ನ್ಯೂಸ್‌ ಕಾರ್ಯನಿರ್ವಾಹಕ ರಾಜಾನುಕುಂಟೆ ವೆಂಕಟೇಶ್, ದಿವ್ಯ ತಮ್ಮ ಸಂದೇಶ್ ಸೇರಿ ಮೂವರನ್ನು ಈಗಾಗಲೇ ಬಂಧಿಸಿದ್ದಾರೆ.

ಸುಲಿಗೆ ಕೃತ್ಯಗಳಿಗೆ ವಾಟ್ಸ್ ಆಪ್‌ನಲ್ಲಿ ‘ಸೈ ರಿಸರ್ಚ್ ಟೀಂ’ ಹೆಸರಿನ ಗ್ರೂಪ್ ಅನ್ನು ವೆಂಕಟೇಶ್‌ ಹಾಗೂ ದಿವ್ಯಾ ಮಾಡಿಕೊಂಡಿದ್ದರು. ಈ ಗ್ರೂಪ್‌ನಲ್ಲಿ ತಮ್ಮ ಕಾರ್ಯಸೂಚಿಗಳ ಬಗ್ಗೆ ಆರೋಪಿಗಳು ಚರ್ಚಿಸುತ್ತಿದ್ದರು. ಈ ಪ್ರಕರಣ ಹೊರ ಬರುತ್ತಿದ್ದಂತೆಯೇ ಮತ್ತೊಂದು ಪ್ರಕರಣ ಬೆಳಕಿಗೆ ಬಂತು. ಇಂದಿರಾ ನಗರದ 80 ಅಡಿ ರಸ್ತೆಯ ಮೈಕಲ್ ಪಾಳ್ಯ ಸಮೀಪದ ಸಹರಾ ಇಂಟರ್ ನ್ಯಾಷನಲ್ ಸ್ಪಾದ ವ್ಯವಸ್ಥಾಪಕ ಮಹೇಶ್ ಶೆಟ್ಟಿಗೆ ಬೆದರಿಸಿ 1 ಲಕ್ಷ ರು ಸುಲಿಗೆ ಮಾಡಿದ್ದು, ಈ ಬಗ್ಗೆ ವ್ಯವಸ್ಥಾಪಕ ನೀಡಿದ ದೂರಿನ ಮೇರೆಗೆ ರಾಜ್ ನ್ಯೂಸ್‌ ನ ವೆಂಕಟೇಶ್ ಹಾಗೂ ಇತರರ ವಿರುದ್ಧ ಇಂದಿರಾನಗರ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈ ಎರಡೂ ಪ್ರಕರಣಗಳು ಇಂದಿರಾಗರದಲ್ಲಿ ನಡೆದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago