Featured

ಹತಾಶರಾಗಬೇಡಿ ನಿಮ್ಮೊಂದಿಗೆ ನಾವಿದ್ದೇವೆ ,ಇಡೀ ಭಾರತವಿದೆ : ಇಸ್ರೋ ವಿಜ್ಞಾನಿಗಳಿಗೆ ಮೋದಿ -Vishwanews24

ಬೆಂಗಳೂರು: ಚಂದ್ರನನ್ನು ಸ್ಪರ್ಶಿಸುವ ನಮ್ಮ ಸಂಕಲ್ಪ ಇನ್ನೂ ಬಲವಾಗಿದೆ ಮತ್ತು ಇನ್ನೂ ಉತ್ತಮವಾದದ್ದು ಬರಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಬಾಹ್ಯಾಕಾಶ ಸಂಸ್ಥೆ ಇಸ್ರೋ ವಿಜ್ಞಾನಿಗಳಿಗೆ ತಿಳಿಸಿದರು.

ಬೆಂಗಳೂರಿನಲ್ಲಿರುವ ಬಾಹ್ಯಾಕಾಶ ಏಜೆನ್ಸಿಯ ಪ್ರಧಾನ ಕಚೇರಿಯಲ್ಲಿ ಇಸ್ರೋ ವಿಜ್ಞಾನಿಗಳೊಂದಿಗಿನ ಸಂವಾದದ ಸಂದರ್ಭದಲ್ಲಿ ಮಾತನಾಡಿ, ನೀವು ದೇಶಕ್ಕಾಗಿ ಬದುಕುವವರು. ಭಾರತದ ಕೀರ್ತಿಯನ್ನು ಉನ್ನತ ಮಟ್ಟದಲ್ಲಿಡಲು ನಿಮ್ಮ ಸ್ವಂತ ಕನಸುಗಳನ್ನು ತ್ಯಾಗ ಮಾಡುವ ಮತ್ತು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುವವರು ನೀವೇ ಎಂದು ಹುರಿದುಂಬಿಸಿದರು.

ವಿಕ್ರಮ್ ಲ್ಯಾಂಡರ್‌ನ ಯೋಜಿತ ಸ್ಪರ್ಶವನ್ನು ವೀಕ್ಷಿಸಲು ಶುಕ್ರವಾರ ರಾತ್ರಿ ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ಮೋದಿ, ಇಸ್ರೋ ವಿಜ್ಞಾನಿಗಳಿಗೆ ಇಡೀ ದೇಶವು ನಿಮ್ಮೊಂದಿಗೆ ನಿಂತಿದೆ ಮತ್ತು ಭಾರತದ ಬಾಹ್ಯಾಕಾಶ ಕಾರ್ಯಕ್ರಮದಲ್ಲಿ ಇನ್ನೂ ಉತ್ತಮವಾದದ್ದು ಬರಬೇಕಿದೆ. ಕಳೆದ ರಾತ್ರಿಯ ನಿಮ್ಮ ಮನಸ್ಸಿನ ಸ್ಥಿತಿಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ನಿಮ್ಮ ಮುಖದಲ್ಲಿನ ದುಃಖವನ್ನು ನಾನು ಓದಬಲ್ಲೆ. ನೀವು ರಾತ್ರಿ ಮಲಗಲಿಲ್ಲ. ಇಂದಿನ ನಮ್ಮ ಕಲಿಕೆ ನಾಳೆ ನಮ್ಮನ್ನು ಗಟ್ಟಿಗೊಳಿಸುತ್ತದೆ, ಹತಾಶರಾಗಬೇಡಿ. ನಿಮ್ಮೊಂದಿಗೆ ನಾವಿದ್ದೇವೆ. ಇಡೀ ಭಾರತವಿದೆ ಎಂದು ಹೇಳಿ ಇಸ್ರೋ ವಿಜ್ಞಾನಿಗಳ ಕಾರ್ಯಕ್ಷಮತೆಯನ್ನು ಹಾಗೂ ಪರಿಶ್ರಮವನ್ನು ಕೊಂಡಾಡಿದರು.

ರೂಪಿತ ಯೋಜನೆಗಳು ನಿಖರವಾಗಿ ನಡೆಯುತ್ತಿಲ್ಲ ಎಂಬುದನ್ನು ನಾನು ನೋಡಿದಾಗ ನಿಮ್ಮ ಒತ್ತಡವನ್ನು ಹೆಚ್ಚಿಸಲು ನಾನು ಬಯಸುವುದಿಲ್ಲ. ಅದಕ್ಕಾಗಿಯೇ ನಾನು ಹೊರಟು ನಿಮ್ಮೆಲ್ಲರಿಗೂ ನಿಮ್ಮ ಆಲೋಚನೆಗಳು ಮತ್ತು ಭಾವನೆಗಳನ್ನು ಸಂಗ್ರಹಿಸಲು ಸ್ವಲ್ಪ ಸಮಯವನ್ನು ನೀಡಿದ್ದೇನೆ. ಕಠಿಣ ಪರಿಶ್ರಮಗಳು ಹೊಸ ಸನ್ನಿವೇಶಕ್ಕೆ ನಾಂದಿ ಹಾಡುತ್ತವೆ. ಭವಿಷ್ಯದಲ್ಲಿ ಇಸ್ರೋ ಯಶಸ್ಸನ್ನು ಕಾಣಲಿದೆ. ಚಂದ್ರಯಾನ ಪ್ರಯಾಣ ಒಂದು ಸುಂದರ ಕ್ಷಣ. ದೇಶಕ್ಕಾಗಿ ನಿಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಿರಿ. ಸಾಧನೆಯ ಕೊನೆಯ ಕ್ಷಣದಲ್ಲಿ ನಿಮಗೆಲ್ಲ ನೋವಾಗಿದೆ. ಭಾರತಮಾತೆಯ ಸೇವೆಗೆ ಶ್ರಮವಹಿಸಿದ್ದೀರಿ. ನಿಮ್ಮ ಶ್ರಮವನ್ನು ಇಡೀ ದೇಶವೇ ಕೊಂಡಾಡುತ್ತಿದೆ ಎಂದು ಹೇಳಿದರು.

 

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 hour ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

4 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

4 hours ago