Featured

ಹತ್ತು ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಮಹಾಕುಂಭ ಮೇಳ : ಮಧ್ಯಪ್ರದೇಶದ ಭೋಪಾಲ್‍ನಲ್ಲಿ ವಿಶ್ವ ದಾಖಲೆ ಬರೆದ ಬಿಜೆಪಿ

ಭೋಪಾಲ್‍ :ಬಿಜೆಪಿ ಹಾಗೂ ಮೋದಿ ಅವರ ವರ್ಚಸ್ಸು ದಿನೇ ದಿನೇ ಹೆಚ್ಚಾಗುತ್ತಿದ್ದು, ರಾಷ್ಟ್ರದ ಹಳ್ಳಿ ಹಳ್ಳಿಗಳಿಗೂ ಕೇಸರಿ ಪಡೆ ಲಗ್ಗೆಯಿಡುತ್ತಿದೆ. ಜನರ ಮನಸ್ಸನ್ನು ಗೆಲ್ಲುವ ಮೂಲಕ ತಳಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುತ್ತಿದೆ. ಸದ್ಯ ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಮತ್ತೊಂದು ಬಾರಿ ಕಳೆದ ಲೋಕಸಭೆ ಚುನಾವಣೆಯಂತೆಯೇ ಗೆಲುವನ್ನು ಪಡೆದು ಅಧಿಕಾರದ ಗದ್ದುಗೆಗೇರಲು ಮಾಸ್ಟರ್ ಪ್ಲಾನ್ ಗಳನ್ನು ರೂಪಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ಈಗಾಗಲೇ ಪ್ರಚಾರ ಕಾರ್ಯವನ್ನು ಶುರು ಮಾಡಿಕೊಂಡಿದೆ. ಇದರ ಭಾಗವಾಗಿ  ಮಧ್ಯಪ್ರದೇಶದ ಭೋಪಾಲ್ ನಲ್ಲಿ ಐತಿಹಾಸಿಕ ಸಮಾವೇಶವೊಂದನ್ನು ಬಿಜೆಪಿ ಆಯೋಜನೆ ಮಾಡಿತ್ತು. ಕಾರ್ಯಕರ್ತರ ಮಹಾಕುಂಭ ಎಂದು ಈ ಸಮಾವೇಶಕ್ಕೆ ಹೆಸರಿಡಲಾಗಿತ್ತು. ಈ ಐತಿಹಾಸಿಕ ಸಮಾವೇಶದಲ್ಲಿ ಸುಮಾರು ಹದಿಮೂರು ಲಕ್ಷಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರನ್ನು ರಾಜ್ಯದ ಮೂಲೆ ಮೂಲೆಯಿಂದ ಮಧ್ಯಪ್ರದೇಶದ ಬಿಜೆಪಿ ಘಟಕ ಕರೆತಂದಿತ್ತು. ರಾಷ್ಟ್ರದ ಇತಿಹಾಸದಲ್ಲಿಯೇ ರಾಜಕೀಯ ಸಮಾವೇಶ ಒಂದರಲ್ಲಿ ಇಷ್ಟೊಂದು ಜನರು ಸೇರಿರುವುದು ಇದೇ ಮೊದಲ ಬಾರಿ.

ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಇದೊಂದು ವಿಶ್ವ ದಾಖಲೆ ಎಂದು ಬಿಜೆಪಿ ಬಣ್ಣಿಸಿದೆ. ಲಕ್ಷಾಂತರ ಜನರು ಸೇರಿದ್ದರೂ ಕೂಡ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಬಿಜೆಪಿ ಹಮ್ಮಿಕೊಂಡಿತ್ತು. ಭೋಪಾಲ್ ನ ಜಂಬೂರಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಸುಮಾರು 70 ಸಾವಿರಕ್ಕೂ ಅಧಿಕ ಮತಗಟ್ಟೆಗಳ ಲಕ್ಷಾಂತರ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. 12 ಸಾವಿರಕ್ಕೂ ಅಧಿಕ ಬಸ್ ಗಳು ಹಾಗೂ 8 ಸಾವಿರಕ್ಕೂ ಅಧಿಕ ಇತರ ವಾಹನಗಳಲ್ಲಿ ಕಾರ್ಯಕರ್ತರನ್ನು ಕರೆತರಲಾಗಿತ್ತು. ಐವತ್ತಕ್ಕೂ ಅಧಿಕ ದೊಡ್ಡದಾದಂತೆ ಎಲ್ಇಡಿ ಪರದೆಗಳನ್ನು ಮೈದಾನದ ಎಲ್ಲೆಡೆ ಅಳವಡಿಸಲಾಗಿತ್ತು.

ಜನಸಂಘದ ಸಹ ಸಂಸ್ಥಾಪಕರಾಗಿರುವ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ದಿನದ ವಾರ್ಷಿಕೋತ್ಸವದ ಆಚರಣೆಯ ಭಾಗವಾಗಿ ಈ ಕಾರ್ಯಕರ್ತರ ಮಹಾ ಕುಂಭವನ್ನು ಬಿಜೆಪಿ ಹಮ್ಮಿಕೊಂಡಿತ್ತು. ಇನ್ನು ಇದೇ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೀನದ ದಯಾಳ್ ಉಪಾಧ್ಯಾಯರ ಸೇವೆಯನ್ನು ಸ್ಮರಿಸುತ್ತಾ ,ಭಾರತ ಮಾತೆ ಸೇವೆ ಮಾಡಲು ನಮಗೆ ಅವಕಾಶ ಸಿಕ್ಕಿದೆ, ದೇಶಧ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಶ್ರಮಿಸಿತ್ತಿದೆ. ದೇಶದ 19 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿರುವುದು ಹೆಮ್ಮೆಯ ವಿಚಾರ, ಅವರು ಕೆಸರನ್ನು ಏರಚಿದಷ್ಟು ನಮ್ಮ ಬಿಜೆಪಿಯ ಕಮಲ ಮತ್ತಷ್ಟು ಬಲಿಷ್ಠವಾಗಿ ಅರಳುತ್ತಿದೆ’ ಎಂದು ಹೇಳಿದರು.

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago