ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಗುರುವಾರ ಕೇಂದ್ರ ಸರ್ಕಾರದ ಶ್ವೇತ ಪತ್ರಕ್ಕೆ ವಿರುದ್ಧವಾಗಿ ಕಪ್ಪು ಪತ್ರ ಬಿಡುಗಡೆ ಮಾಡಿದರು. ಹತ್ತು ವರ್ಷಗಳ ಮೋದಿ ಸರ್ಕಾರದ ಅವಧಿಯ ವೈಫಲ್ಯಗಳನ್ನು ಪಟ್ಟಿ ಮಾಡಿರುವ ಬ್ಲ್ಯಾಕ್ ಪೇಪರ್ ಬಿಡುಗಡೆ ಮಾಡಿದ್ದಾರೆ.
ಕಪ್ಪು ಪತ್ರಕ್ಕೆ ಹತ್ತು ವರ್ಷಗಳ ಅನ್ಯಾಯದ ಕಾಲ ಎಂದು ಹೆಸರಿಸಲಾಗಿದೆ. ಪಕ್ಷದ ಪ್ರಕಾರ, ಕಪ್ಪು ಪತ್ರವು ನಿರುದ್ಯೋಗ, ಬೆಲೆ ಏರಿಕೆ ಮತ್ತು ರೈತರ ಸಂಕಷ್ಟದ ಬಗ್ಗೆ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುತ್ತದೆ.ಮಲ್ಲಿಕಾರ್ಜುನ್ ಖರ್ಗೆ ಅವರು, ‘ಸರ್ಕಾರ ಆರ್ಥಿಕತೆಯಲ್ಲಿ ವಿಫಲವಾಗಿದೆ’ ಎಂದು ಹೇಳಿದರು.
ಕಪ್ಪು ಪತ್ರ ಬಿಡುಗಡೆ ಮಾಡಿದ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖ್ಯಸ್ಥ ಖರ್ಗೆ, “ನಾವು ಸರ್ಕಾರದ ವಿರುದ್ಧ ‘ಕಪ್ಪು ಪತ್ರ’ ಬಿಡುಗಡೆ ಮಾಡುತ್ತಿದ್ದೇವೆ, ಏಕೆಂದರೆ ಅವರು ಸಂಸತ್ತಿನಲ್ಲಿ ಮಾತನಾಡುವಾಗ ಅವರು ಯಾವಾಗಲೂ ಸಾಧನೆಗಳ ಬಗ್ಗೆ ಮಾತನಾಡುತ್ತಾರೆ ಆದರೆ ತಮ್ಮ ವೈಫಲ್ಯಗಳ ಬಗ್ಗೆ ಎಂದಿಗೂ ಮಾತನಾಡುವುದಿಲ್ಲ. ಅವರು ಆರ್ಥಿಕತೆಯಲ್ಲಿ ವಿಫಲರಾಗಿದ್ದಾರೆ” ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.
ನಿರುದ್ಯೋಗ ಈ ದೇಶದ ಬಹುದೊಡ್ಡ ಸಮಸ್ಯೆ, ಅದರ ಬಗ್ಗೆ ಅವರು (ಮೋದಿ) ಮಾತನಾಡುವುದೇ ಇಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಸುದ್ದಿಗಾರರಿಗೆ ತಿಳಿಸಿದರು.
“ಜವಾಹರಲಾಲ್ ನೆಹರು ಅವರು ಸ್ಥಾಪಿಸಿದ ಉದ್ಯೋಗಗಳ ಬಗ್ಗೆ ಪ್ರಧಾನಿ ಮಾತನಾಡಲಿಲ್ಲ, ನೀವು ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ನೆಹರೂ ಅವರನ್ನು ನಿಂದಿಸುತ್ತಿದ್ದೀರಿ, ಆದರೆ ನಿಮ್ಮ ಸ್ವಂತ MNREGA ಬಗ್ಗೆ ಮಾತನಾಡಿ, ಅದಕ್ಕೆ ಹಣ ಬಿಡುಗಡೆಯಾಗಿಲ್ಲ, ಅದು ಗ್ರಾಮೀಣ ಸಂಕಷ್ಟಕ್ಕೆ ಕಾರಣವಾಗಿದೆ,’’ ಎಂದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…